ಕಾನ್ಪುರ : ಉತ್ತರ ಪ್ರದೇಶದ ಕಾನ್ಪುರದಲ್ಲಿ ಗಂಗಾ ನದಿಯ ದಡದಲ್ಲಿ ಗುರುವಾರ ತರಬೇತಿ ವಿಮಾನವೊಂದು ಪತನಗೊಂಡಿದ್ದು, ದುರಂತದಲ್ಲಿ ಕರ್ನಾಟಕ ಮೂಲದ ಪೈಲಟ್ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಾರ್ಗ್ ಏವಿಯೇಷನ್ ನಿರ್ವಹಿಸುತ್ತಿದ್ದ ಟೆಕ್ನಮ್ ವಿಮಾನವು ಇಂದು ಬೆಳಗ್ಗೆ 11.30 ರ ಸುಮಾರಿಗೆ ಟೇಕ್ ಆಫ್ ಆಗಿ ಸುಮಾರು 20 ನಿಮಿಷಗಳ ನಂತರ ಕತ್ರಿ ಪ್ರದೇಶದ ನಾಥಪೂರ್ವ ಗ್ರಾಮದ ಬಳಿ ಪತನಗೊಂಡಿದೆ ಎಂದು ಪೊಲೀಸ್ ಆಯುಕ್ತ ರಘುಬೀರ್ ಲಾಲ್ ಅವರು ಪಿಟಿಐಗೆ ತಿಳಿಸಿದ್ದಾರೆ. ಅಪಘಾತದಲ್ಲಿ ತರಬೇತುದಾರರಾಗಿದ್ದ ಗುಜರಾತ್ ಮೂಲದ ಸಚಿನ್ ಭಾಟಿಯಾ ಮತ್ತು ತರಬೇತಿ ಪಡೆಯುತ್ತಿದ್ದ ಕರ್ನಾಟಕದ ಅಭಿಷೇಕ್ ಪೂಜಾರಿ ಅವರು ಮೃತ ದುರ್ದೈವಿಗಳಾಗಿದ್ದಾರೆ.
