ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಐಪಿಎಲ್ 2025ರ ಕೊನೆಯ ಲೀಗ್ ಪಂದ್ಯದಲ್ಲಿ ಇಂದು ಆರ್‌ಸಿಬಿ vs ಲಕ್ನೋ ಮುಖಾಮುಖಿ

P

Peepal Media • ವಿಜ್ಞಾನ-ತಂತ್ರಜ್ಞಾನ

• 1 ನಿಮಿಷದ ಓದು

ಐಪಿಎಲ್ 2025ರ ಕೊನೆಯ ಲೀಗ್ ಪಂದ್ಯದಲ್ಲಿ ಇಂದು ಆರ್‌ಸಿಬಿ vs ಲಕ್ನೋ ಮುಖಾಮುಖಿ

ಲಕ್ನೋ: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು 2025ರ ಐಪಿಎಲ್‌ನ ಕೊನೆಯ ಲೀಗ್ ಪಂದ್ಯವನ್ನು ಮಂಗಳವಾರ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ವಿರುದ್ಧ ಲಕ್ನೋದಲ್ಲಿ ಆಡಲಿದೆ. ಈ ಪಂದ್ಯದ ಮೂಲಕ ಅಂಕಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಗಳಿಸುವ ಗುರಿಯನ್ನು ಆರ್‌ಸಿಬಿ ಹೊಂದಿದೆ.

ಆರ್‌ಸಿಬಿ ತಂಡವು ಈವರೆಗೆ 13 ಪಂದ್ಯಗಳಲ್ಲಿ ಆಡಿ 17 ಅಂಕಗಳನ್ನು ಗಳಿಸಿದೆ. ಸೋಮವಾರದ ಪಂದ್ಯದಲ್ಲಿ ಗೆದ್ದ ತಂಡವನ್ನು ಬೀಟ್ ಮಾಡಿ, ಅಗ್ರಸ್ಥಾನಕ್ಕೇರಿಕೊಂಡರೆ ಆರ್‌ಸಿಬಿ ಟಾಪ್-2 ಸ್ಥಾನಕ್ಕೇರಬಹುದು. ಆದರೆ ಸೋತರೆ ಟಾಪ್-2 ಸ್ಥಾನದಿಂದ ವಂಚಿತವಾಗಿ ಎಲಿಮಿನೇಟರ್ ಪಂದ್ಯ ಆಡುವ ಒತ್ತಡಕ್ಕೆ ಸಿಲುಕಬೇಕಾಗುತ್ತದೆ. ಇದನ್ನು ತಪ್ಪಿಸಲು ಲಕ್ನೋ ವಿರುದ್ಧ ಗೆಲುವು ಅಗತ್ಯವಾಗಿದೆ. ಈ ಇದು ಸೀಸನ್‌ನಲ್ಲಿ ಆರ್‌ಸಿಬಿ ಮತ್ತು ಲಕ್ನೋ ನಡುವಿನ ಮೊದಲ ಮುಖಾಮುಖಿಯಾಗಿದೆ.

ಗುಜರಾತ್ ಟೈಟಾನ್ಸ್ ತಂಡವು ಮೊದಲ ಸ್ಥಾನವನ್ನು ಖಚಿತಪಡಿಸಿಕೊಳ್ಳಬೇಕಿತ್ತು, ಆದರೆ ಸತತ ಎರಡು ಸೋಲುಗಳಿಂದ ಗಿಲ್ ಪಡೆಗೆ ದೊಡ್ಡ ಹಿನ್ನಡೆಯಾಯಿತು.

ಐಪಿಎಲ್ ಸ್ಥಗಿತಗೊಂಡಾಗ ಆರ್‌ಸಿಬಿ ಉತ್ತಮ ಫಾರ್ಮ್‌ನಲ್ಲಿತ್ತು. ಆದರೆ, ಪುನರಾರಂಭದ ಬಳಿಕ ಆಡಿದ ಎರಡು ಪಂದ್ಯಗಳಲ್ಲಿ ಗೆಲುವು ಸಿಗಲಿಲ್ಲ. ಬೆಂಗಳೂರಿನಲ್ಲಿ ಕೆಕೆಆರ್ ವಿರುದ್ಧದ ಪಂದ್ಯ ಮಳೆಯಿಂದ ಸಂಪೂರ್ಣವಾಗಿ ಕೊಚ್ಚಿಹೋಯಿತು. ನಂತರ ಲಕ್ನೋದಲ್ಲಿ ಹೈದರಾಬಾದ್ ವಿರುದ್ಧ 42 ರನ್‌ಗಳಿಂದ ಸೋಲುಂಡಿತು. ಈಗ ಲಕ್ನೋದಲ್ಲಿ ಅವರದೇ ಮೈದಾನದಲ್ಲಿ ಮತ್ತೊಮ್ಮೆ ಸವಾಲನ್ನು ಎದುರಿಸಬೇಕಾಗಿದೆ.

ಲಕ್ನೋ ಸೂಪರ್ ಜೈಂಟ್ಸ್ ತಂಡವು ಈಗಾಗಲೇ ಪ್ಲೇಆಫ್‌ನಿಂದ ಹೊರಬಿದ್ದಿದೆ. ಆದರೆ ಡೆಲ್ಲಿ, ಚೆನ್ನೈ, ಹೈದರಾಬಾದ್‌ನಂತೆ ಕೊನೆಯ ಪಂದ್ಯದಲ್ಲಿ ಗೆದ್ದು ಪ್ರತಿಷ್ಠೆ ಗಳಿಸುವ ಗುರಿಯನ್ನು ಹೊಂದಿದೆ. ತನ್ನ ಕೊನೆಯ ಪಂದ್ಯದಲ್ಲಿ ಗುಜರಾತ್ ವಿರುದ್ಧ 33 ರನ್‌ಗಳ ಗೆಲುವಿನಿಂದ ಲಕ್ನೋ ಆತ್ಮವಿಶ್ವಾಸದಲ್ಲಿದೆ. ಮಿಚೆಲ್ ಮಾರ್ಷ್ ಶತಕ ಬಾರಿಸಿ ಮಿಂಚಿದ್ದರು. ಮಾರ್ಕ್‌ರಮ್, ಪೂರಣ್, ಬದೋನಿ ಎಲ್ಲರೂ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಆದರೆ ಲಕ್ನೋದ ಬೌಲಿಂಗ್ ಸಾಧಾರಣವಾಗಿದೆ.

ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಬೌಲಿಂಗ್ ತೀರಾ ಕಳಪೆಯಾಗಿತ್ತು.

ಆದರೆ ಆಸ್ಟ್ರೇಲಿಯಾದ ವೇಗಿ ಜೋಶ್ ಹೇಝಲ್‌ವುಡ್ ಮರಳಿದ್ದರಿಂದ ಆರ್‌ಸಿಬಿಯ ಬೌಲಿಂಗ್ ವಿಭಾಗಕ್ಕೆ ಬಲ ಸಿಕ್ಕಿದೆ, ಆದರೆ ಲುಂಗಿ ಎನ್‌ಗಿಡಿ ಹೊರಗುಳಿಯಬೇಕಾಗುತ್ತದೆ.

ಬ್ಯಾಟಿಂಗ್‌ನಲ್ಲಿ ಸಾಲ್ಟ್, ಕೊಹ್ಲಿ, ಪಾಟಿದಾರ್, ಶೆಫರ್ಡ್, ಡೇವಿಡ್ ಪಾತ್ರ ನಿರ್ಣಾಯಕವಾಗಲಿದೆ. ಆದರೆ ಹೈದರಾಬಾದ್ ವಿರುದ್ಧ 15.3 ಓವರ್‌ಗಳಲ್ಲಿ 3 ವಿಕೆಟ್‌ಗೆ 173 ರನ್‌ ಗಳಿಸಿದ್ದ ಆರ್‌ಸಿಬಿ, ನಂತರದ 4.3 ಓವರ್‌ಗಳಲ್ಲಿ 16 ರನ್‌ಗೆ 7 ವಿಕೆಟ್‌ ಕಳೆದುಕೊಂಡು ಮಹಾಪತನಕ್ಕೆ ಒಳಗಾಯಿತು. ಈ ದುರಂತ ಮತ್ತೆ ಸಂಭವಿಸದಂತೆ ಆರ್‌ಸಿಬಿ ಎಚ್ಚರಿಕೆ ವಹಿಸಬೇಕಾಗುತ್ತದೆ.

P

Peepal Media

Peepal Media · ವಿಜ್ಞಾನ-ತಂತ್ರಜ್ಞಾನ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version