ಕ್ರಿಕೆಟ್ ಜಗತ್ತಿನ ಹಿಟ್‌ಮ್ಯಾನ್ ಎಂದೇ ಜನಪ್ರಿಯರಾಗಿರುವ ರೋಹಿತ್ ಶರ್ಮಾ ಅವರು ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ತಮ್ಮ ಇನಿಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡುವ ಮೂಲಕ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ.
ಟೆಸ್ಟ್ ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ ಕೆಲ ದಿನಗಳಿಂದ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಹೀಗಾಗಿ ಇವರು ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಇನ್ನು ಮುಂದೆ ರೋಹಿತ್ ಶರ್ಮಾ ಬರೀ ಏಕದಿನ ಫಾರ್ಮೆಟ್‌ನಲ್ಲಿ ಮಾತ್ರ ತಂಡದ ಪರ ಕಣಕ್ಕೆ ಇಳಿಯುವುದನ್ನು ಕಾಣಬಹುದಾಗಿದೆ. ಭಾರತದಲ್ಲಿ ನಡೆದಿದ್ದ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಹಾಗೂ ಆಸ್ಟ್ರೇಲಿಯಾ ಪ್ರವಾಸದ ವೇಳೆ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ ನಿವೃತ್ತಿ ಘೋಷಿಸಿದ್ದಾರೆ.
ರೋಹಿತ್ ಶರ್ಮಾ ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಈ ಸರಣಿಯಲ್ಲಿ ಟೀಮ್ ಇಂಡಿಯಾ 1-3ರಿಂದ ಸೋಲು ಕಂಡಿತ್ತು. ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿತ್ತು. ಇನ್ನು ರೋಹಿತ್ ಶರ್ಮಾ ನಾಯಕರಾಗಿ ಮುಂದುವರೆಯುವ ಬಗ್ಗೆ ಹಲವು ಪ್ರಶ್ನೆಗಳು ಇದ್ದವು. ಈ ಬಗ್ಗೆ ಅವರಿಗೆ ಹಲವು ಬಾರಿ ಪ್ರಶ್ನೆಗಳನ್ನು ಕೇಳಲಾಗಿತ್ತು. ಐಪಿಎಲ್ ಮಧ್ಯದಲ್ಲೇ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ಇದ್ದಕ್ಕಿದ್ದಂತೆ ನಿವೃತ್ತಿ ಘೋಷಿಸಿದ್ದಾರೆ. ಐಪಿಎಲ್ ಬಳಿಕ ಭಾರತ ಜೂನ್‌ನಲ್ಲಿ ಇಂಗ್ಲೆಂಡ್‌ನಲ್ಲಿ ಇಂಗ್ಲೆಂಡ್ ಪ್ರವಾಸವನ್ನು ಬೆಳೆಸಲಿದೆ. ಈ ವೇಳೆ ರೋಹಿತ್ ಶರ್ಮಾ ಈ ನಿರ್ಧಾರ ತೆಗೆದುಕೊಂಡಿದ್ದಾರೆ.