ಏಳು ಕಾರ್ಮಿಕರ ಮೃತರ ಕುಟುಂಬಗಳಿಗೆ ಪರಿಹಾರ ನೀಡಿ – ಸರ್ಕಾರಕ್ಕೆ ಕುಮಾರಸ್ವಾಮಿ ಒತ್ತಾಯ

ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆಯ ಮಾದಪಟ್ಟಣದಲ್ಲಿರುವ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು ಏಳು ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಅತ್ಯಂತ ದುಃಖಕರವಾಗಿದೆ. ಮೃತ ಕಾರ್ಮಿಕರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದಲ್ಲಿ ಕಲ್ಲು ಕ್ವಾರಿಯ ಬಂಡೆ ಕುಸಿದು ಏಳು ಜನ ಕಾರ್ಮಿಕರು ಧಾರುಣ ಸಾವನ್ನಪ್ಪಿರುವ ಘಟನೆ ನನಗೆ ಅತೀವ ನೋವುಂಟು ಮಾಡಿದೆ. ಮೃತಪಟ್ಟ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ ಹಾಗೂ ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ರಾಜ್ಯ ಸರಕಾರ ನೊಂದ ಕುಟುಂಬ ಕುಟುಂಬಗಳಿಗೆ ತಕ್ಷಣವೇ ಸೂಕ್ತ ಪರಿಹಾರ ನೀಡುವುದರ ಜತೆಗೆ ಇನ್ನಿತರ ತುರ್ತು ನೆರವು ಒದಗಿಸಬೇಕು. ಜತೆಗೆ ಕ್ವಾರಿಗಳಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ನಿಯಮಗಳನ್ನು ಜಾರಿಗೆ ಕ್ರಮ ವಹಿಸಿ ಸಂಬಂಧಿತ ಇಲಾಖೆ ತೀವ್ರ ನಿಗಾ ಇರಿಸುವಂತೆ ಆದೇಶಿಸಬೇಕು. ಇಂಥ ಕಠಿಣ ಕ್ರಮಗಳು ಆಗದಿರುವ ಕಾರಣಕ್ಕೆ ಈ ರೀತಿಯ ದುರಂತಗಳು ಮರುಕಳಿಸುತ್ತಿವೆ. ರಾಜ್ಯದಲ್ಲಿ ಪದೇಪದೇ ಕ್ವಾರಿ ದುರಂತಗಳು ಸಂಭವಿಸುತ್ತಿದ್ದರೂ ಯಾರ ಮೇಲೆಯೂ ಕ್ರಮ ಆಗಿಲ್ಲ ಎನ್ನುವುದು ಅತ್ಯಂತ ಬೇಸರದ ಸಂಗತಿ. ಕ್ವಾರಿ ಮಾಲೀಕರು ಕೂಡ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ವಹಿಸಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು