ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಖ್ಯಾತ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ

P

Peepal Media Desk • ನಿಧನ ಸುದ್ದಿ

• 1 ನಿಮಿಷದ ಓದು

ಖ್ಯಾತ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ

ಚೆನ್ನೈ: ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರರಂಗದಲ್ಲಿ ತಮ್ಮದೇ ಆದ ನಿರ್ದೇಶನ ಶೈಲಿಯಿಂದ ಗುರುತಿಸಿಕೊಂಡಿದ್ದ ಖ್ಯಾತ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ಅವರು ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

1931ರ ಸೆಪ್ಟೆಂಬರ್ 21ರಂದು ಜನಿಸಿದ್ದ ಸಿಂಗೀತಂ ಶ್ರೀನಿವಾಸ ರಾವ್ ಅವರು ಸುಮಾರು ಆರು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ನಿರ್ದೇಶಕರಾಗಿ ಮಾತ್ರವಲ್ಲದೆ ಬರಹಗಾರ, ನಿರ್ಮಾಪಕ ಹಾಗೂ ಸಂಗೀತ ನಿರ್ದೇಶಕರಾಗಿಯೂ ಅವರು ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ್ದರು.

ಕನ್ನಡದಲ್ಲೂ ಹಲವು ಗಮನಾರ್ಹ ಚಿತ್ರಗಳು
ಕನ್ನಡ ಚಿತ್ರರಂಗದಲ್ಲಿ ವರನಟ ಡಾ. ರಾಜ್‌ಕುಮಾರ್ ಅಭಿನಯದ ‘ಹಾಲು ಜೇನು’ ಹಾಗೂ ‘ದೇವತಾ ಮನುಷ್ಯ’ ಸೇರಿದಂತೆ ಹಲವು ಪ್ರಮುಖ ಚಿತ್ರಗಳಿಗೆ ಸಿಂಗೀತಂ ಶ್ರೀನಿವಾಸ ರಾವ್ ನಿರ್ದೇಶನ ನೀಡಿದ್ದರು. ಕಮಲ್ ಹಾಸನ್ ಅಭಿನಯದ ಸಂಭಾಷಣೆರಹಿತ ಪ್ರಯೋಗಾತ್ಮಕ ಚಿತ್ರ ‘ಪುಷ್ಪಕ ವಿಮಾನ’ ಅವರ ನಿರ್ದೇಶನದ ಪ್ರಮುಖ ಕೃತಿಗಳಲ್ಲೊಂದು.

ಸಾಮಾನ್ಯ ಕಥಾವಸ್ತುವಿಗೂ ವಿಭಿನ್ನ ನಿರೂಪಣೆ ನೀಡುವ ಮೂಲಕ ಪ್ರೇಕ್ಷಕರ ಗಮನ ಸೆಳೆಯುತ್ತಿದ್ದ ಅವರು, ತೆಲುಗು, ತಮಿಳು, ಕನ್ನಡ, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಒಟ್ಟಾರೆ 60ಕ್ಕೂ ಅಧಿಕ ಚಿತ್ರಗಳಿಗೆ ಅವರು ಆ್ಯಕ್ಷನ್‌ ಕಟ್‌ ಹೇಳಿದ್ದಾರೆ.

‘ಆದಿತ್ಯ 369’ ಸೇರಿ ಹಲವು ಪ್ರಯೋಗಗಳು
ತೆಲುಗು ಚಿತ್ರರಂಗದಲ್ಲೂ ಸಿಂಗೀತಂ ಶ್ರೀನಿವಾಸ ರಾವ್ ಅವರ ಕೊಡುಗೆ ಗಮನಾರ್ಹವಾಗಿದೆ. ‘ಆದಿತ್ಯ 369’, ‘ಭೈರವ ದ್ವೀಪ’ ಸೇರಿದಂತೆ ಹಲವು ಜನಪ್ರಿಯ ಚಿತ್ರಗಳು ಅವರ ಸೃಜನಶೀಲ ನಿರ್ದೇಶನಕ್ಕೆ ಸಾಕ್ಷಿಯಾಗಿವೆ. ಕಮಲ್ ಹಾಸನ್, ನಂದಮೂರಿ ಬಾಲಕೃಷ್ಣ ಸೇರಿದಂತೆ ದಕ್ಷಿಣ ಭಾರತದ ಹಲವು ಪ್ರಮುಖ ನಟರೊಂದಿಗೆ ಅವರು ಕೆಲಸ ಮಾಡಿದ್ದರು.

ಚಿತ್ರರಂಗದಲ್ಲಿ ಹಲವು ದಶಕಗಳ ಅನುಭವ ಹೊಂದಿದ್ದರೂ ಸಿನಿಮಾ ಮೇಲಿನ ಅವರ ಆಸಕ್ತಿ ಕೊನೆಯವರೆಗೂ ಮುಂದುವರಿದಿತ್ತು. ವಯಸ್ಸಿನ ಮಿತಿಯನ್ನೂ ಮೀರಿ ಅವರು ಹೊಸ ಪ್ರಯೋಗಗಳಲ್ಲಿ ತೊಡಗಿಸಿಕೊಂಡಿದ್ದರು. ಅವರ ನಿಧನದಿಂದ ಭಾರತೀಯ ಚಿತ್ರರಂಗದ ವಿಶಿಷ್ಟ ಸೃಜನಶೀಲ ನಿರ್ದೇಶಕರೊಬ್ಬರನ್ನು ಕಳೆದುಕೊಂಡಂತಾಗಿದೆ.

ಸಿಂಗೀತಂ ಶ್ರೀನಿವಾಸ ರಾವ್ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ಕಲಾವಿದರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ.

P

Peepal Media Desk

Peepal Media · ನಿಧನ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version