ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಮಗುವಿನ ಹಕ್ಕಿಗಿಂತಲೂ ತಾಯಿಯ ಹಕ್ಕು ಬಹಳ ಮುಖ್ಯ – ಸುಪ್ರೀಂ ಮಹತ್ವದ ಆದೇಶ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ಮೀಡಿಯಾ

• 1 ನಿಮಿಷದ ಓದು

ಮಗುವಿನ ಹಕ್ಕಿಗಿಂತಲೂ ತಾಯಿಯ ಹಕ್ಕು ಬಹಳ ಮುಖ್ಯ – ಸುಪ್ರೀಂ ಮಹತ್ವದ ಆದೇಶ

ನವದೆಹಲಿ : ಇಷ್ಟ ಇಲ್ಲದಿದ್ರೆ ತಾಯಿಯಾಗಬಾರದು ಎಂದು ಹೇಳಿರುವ ಸುಪ್ರೀಂ ಕೋರ್ಟ್ (Supreme court) ಅಪ್ರಾಪ್ತೆಯ 30 ವಾರಗಳ ಗರ್ಭವನ್ನು ಕೊನೆಗೊಳಿಸಲು ಅನುಮತಿ ನೀಡಿದೆ. ಹುಟ್ಟದೇ ಇರುವ ಮಗುವಿನ ಹಕ್ಕಿಗಿಂತಲೂ ತಾಯಿಯ ಹಕ್ಕು ಬಹಳ ಮುಖ್ಯ ಎಂದು ಹೇಳಿರುವ ನ್ಯಾಯಪೀಠ ಮಹಿಳೆಯನ್ನು ತಾಯಿಯಾಗಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ತನ್ನ ಇಚ್ಛೆಗೆ ವಿರುದ್ಧವಾಗಿ ತಾಯಿಯಾಗುವಂತೆ ಮಹಿಳೆಗೆ ನ್ಯಾಯಾಂಗ ಒತ್ತಾಯಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್, ಅಪ್ರಾಪ್ತ ವಯಸ್ಸಿನ ಬಾಲಕಿಯ 30 ವಾರಗಳ ಗರ್ಭವನ್ನು ವೈದ್ಯಕೀಯವಾಗಿ ಕೊನೆಗೊಳಿಸಲು ಅನುಮತಿ ನೀಡಿದೆ.

ಬಾಲಕಿ ಅಪ್ರಾಪ್ತ ವಯಸ್ಸಿನಲ್ಲಿದ್ದಾಗ ಗರ್ಭ ಧರಿಸಿದ್ದಳು. ಪ್ರಸ್ತುತ ಅವಳು ಗರ್ಭವನ್ನು ಮುಂದುವರಿಸಲು ಬಯಸುತ್ತಿಲ್ಲ ಎಂಬುದನ್ನು ಗಮನಿಸಿದ ನ್ಯಾಯಾಲಯವು, ಆಕೆಯ ಪುನರುತ್ಪಾದಕ ಸ್ವಾಯತ್ತತೆಗೆ ಪ್ರಾಮುಖ್ಯತೆ ನೀಡಬೇಕು ಎಂದು ಒತ್ತಿ ಹೇಳಿತು. ಆಕೆಯ ಇಚ್ಛೆಯ ವಿರುದ್ಧ ಗರ್ಭವನ್ನು ಮುಂದುವರಿಸಲು ಒತ್ತಾಯಿಸಲಾಗದು ಎಂದು ನ್ಯಾಯಮೂರ್ತಿಗಳಾದ ಬಿವಿ ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ದ್ವಿಸದಸ್ಯ ಪೀಠವು ಆದೇಶ ನೀಡಿದೆ.

ಬಾಲಕಿ ಅಪ್ರಾಪ್ತೆಯಾಗಿದ್ದಾಗ ಯುವಕನೊಂದಿಗಿನ ಸಂಬಂಧದಲ್ಲಿ ಗರ್ಭ ಧರಿಸಿದ್ದಳು. ಇದು ಸಮ್ಮತಿಯಿಂದ ಆಗಿರಲಿ ಅಥವಾ ಇಲ್ಲದಿರಲಿ, ಬಾಲಕಿ ಮಗುವನ್ನು ಹೊರುವ ಇಚ್ಛೆಯನ್ನು ಮದುವೆಯಾದ ಮಹಿಳೆಯಾಗಲಿ, ಮದುವೆಯಾಗದ ಯುವತಿಯಾಗಲಿ ಅಥವಾ ಅಪ್ರಾಪ್ತೆಯೇ ಆಗಲಿ ಅನಗತ್ಯ ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಕಾನೂನಿಗೂ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಪ್ರಾಪ್ತ ವಯಸ್ಕಳಾಗಿದ್ದಾಗ ಗರ್ಭ ಧರಿಸಿದ ಹುಡುಗಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸಲು ಅನುಮತಿ ನೀಡಿದ ಸುಪ್ರೀಂ ಕೋರ್ಟ್ ಈ ಹೇಳಿಕೆಗಳನ್ನು ನೀಡಿದೆ.

ಅರ್ಜಿ ಸಲ್ಲಿಸಿರುವ ಅಪ್ರಾಪ್ತ ಯುವತಿಯ ವಯಸ್ಸು ಮತ್ತು ಆಕೆಯ ಹಕ್ಕನ್ನು ಗಮನದಲ್ಲಿಟ್ಟುಕೊಂಡು ಈ ತೀರ್ಪು ನೀಡಲಾಗಿದೆ. ಈ ಪ್ರಕರಣದಲ್ಲಿ ಆ ಯುವತಿಯದ್ದು ಉದ್ದೇಶಪೂರ್ವಕವಾದ ಗರ್ಭಧಾರಣೆ ಅಲ್ಲದ ಕಾರಣದಿಂದ ಮತ್ತು ಆ ಹುಡುಗಿ ಮಗುವನ್ನು ಹೆರಲು ಬಯಸದ ಕಾರಣದಿಂದ ಆಕೆಗೆ ಗರ್ಭಪಾತಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಕೋರ್ಟ್ ಹೇಳಿದೆ.

ಹುಡುಗಿ 17ನೇ ವಯಸ್ಸಿನಲ್ಲಿ ಗರ್ಭ ಧರಿಸಿದ್ದಳು. ಆಕೆಗೆ ಈಗ 18 ವರ್ಷ. ಈಗ ಆಕೆಯ ಗರ್ಭಧಾರಣೆಯು 30 ವಾರಗಳನ್ನು ತಲುಪಿತ್ತು. ಸ್ನೇಹಿತನೊಂದಿಗಿನ ಸಂಬಂಧದಿಂದ ಆಕೆ ಗರ್ಭಿಣಿಯಾಗಿದ್ದು, ಮದುವೆಯಾಗದೆ ಗರ್ಭಧಾರಣೆಯನ್ನು ಮುಂದುವರಿಸುವುದು ಆ ಹುಡುಗಿಗೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಆಘಾತಕಾರಿಯಾಗಿದೆ ಎಂದು ವಾದಿಸಲಾಗಿತ್ತು. ಹೀಗಾಗಿ, ಬಾಲಕಿಗೆ ಗರ್ಭಪಾತ ಮಾಡಿಸಲು ಅನುಮತಿ‌ ನೀಡಲಾಗಿದೆ.

ಭಾರತದ ಕಾನೂನಿನಲ್ಲಿ ಗರ್ಭಪಾತಕ್ಕೆ ಅನುಮತಿ ಇದೆಯೇ?
ಭಾರತದಲ್ಲಿ ಗರ್ಭಪಾತಕ್ಕೆ ಅನುಮತಿಯಿದೆ. 1971ರ ಮೆಡಿಕಲ್ ಟರ್ಮಿನೇಷನ್ ಆಫ್‌ ಪ್ರೆಗ್ನೆನ್ಸಿ ಕಾಯ್ದೆ ಪ್ರಕಾರ ಮಹಿಳೆಗೆ ಸುರಕ್ಷಿತ ಗರ್ಭಪಾತಕ್ಕೆ ಅನುಮತಿ ನೀಡಿದೆ.

ಕೆಲವೊಂದು ಸಂದರ್ಭದಲ್ಲಿ ಮಹಿಳೆ 24 ವಾರಗಳ ಗರ್ಭಿಣಿಯಾದರೂ ಗರ್ಭಪಾತ ಮಾಡಿಸಬಹುದು. ಇನ್ನು ತಾಯಿಯ ಪ್ರಾಣಕ್ಕೆ ಅಪಾಯವಿದ್ದಾಗ ಅಥವಾ ಮಗುವಿನಲ್ಲಿ ನ್ಯೂನತೆಯಿದ್ದಾಗ ಯಾವುದೇ ತಿಂಗಳಿನಲ್ಲಿ ಗರ್ಭಪಾತ ನೀಡಲು ಅನುಮತಿ ಇದೆ.

ಅತ್ಯಾಚಾರದಿಂದ ಗರ್ಭಿಣಿಯಾದರೆ ಆ ಗರ್ಭವನ್ನು ತೆಗೆದು ಹಾಕಲು ಅನುಮತಿ ನೀಡಲಾಗುವುದು. ಅಪ್ರಾಪ್ತೆ ಗರ್ಭಿಣಿಯಾದರೆ ಆ ಗರ್ಭವನ್ನು ತೆಗೆಸಲು ಅನುಮತಿ ನೀಡಲಾಗುವುದು.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು