ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಿಹಾರದ ರಾಜಕೀಯ ಬೆಳವಣಿಗೆಯಲ್ಲಿ ಪ್ರಕ್ಷುಬ್ಧತೆ

PPeepal Media Desk

Peepal Media Desk ಮೀಡಿಯಾ

• 1 ನಿಮಿಷದ ಓದು

ಬಿಹಾರದ ರಾಜಕೀಯ ಬೆಳವಣಿಗೆಯಲ್ಲಿ ಪ್ರಕ್ಷುಬ್ಧತೆ
ಬಿಹಾರದ ರಾಜಕೀಯ ಬೆಳವಣಿಗೆಗಳು ಕ್ಷಣ ಕ್ಷಣಕ್ಕೂ ಎಲ್ಲರ ಗಮನ ಸೆಳೆಯುತ್ತಿದೆ. ಅತ್ತ ಪಟ್ನಾದಲ್ಲಿ ಬಿಜೆಪಿ ಪಕ್ಷವು ತನ್ನ ಪಕ್ಷದ ಸಂಸದರು, ಶಾಸಕರ ಸಭೆಗೆ ಕರೆ ಕೊಟ್ಟಿದ್ದರೆ, ಮತ್ತೊಂದು ಕಡೆ, ಪುರ್ನಿಯಾದಲ್ಲಿ ಕಾಂಗ್ರೆಸ್ ಮುಖಂಡರ ಸಭೆಗೆ ಕರೆ ಕೊಟ್ಟಿರುವುದು ಜನರಲ್ಲಿ ಕುತೂಹಲದ ಜೊತೆ, ಹಲವಾರು ಪ್ರಶ್ನೆಗಳನ್ನೂ ಹುಟ್ಟುಹಾಕುತ್ತಿದೆ

ಪಾಟ್ನಾ: ಬಿಹಾರದ ಆಡಳಿತ ‘ಮಹಾಘಟಬಂಧನ್’ ನಲ್ಲಿನ ಗೊಂದಲದ ನಡುವೆಯೇ, ಮುಂಬರುವ ಲೋಕಸಭಾ ಚುನಾವಣೆಯ ಕುರಿತು ಚರ್ಚಿಸಲು ಪ್ರತಿಪಕ್ಷ ಬಿಜೆಪಿ ತನ್ನ ಸಂಸದರು ಮತ್ತು ಶಾಸಕರ ಸಭೆಯನ್ನು ಶನಿವಾರ ಕರೆದಿದೆ.

ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ಸಾಮ್ರಾಟ್ ಚೌಧರಿ ಅವರ ಪ್ರಕಾರ, ಸಭೆಯಲ್ಲಿ ಸಾರ್ವತ್ರಿಕ ಚುನಾವಣೆಗೆ ಪಕ್ಷದ ಕಾರ್ಯತಂತ್ರದ ಕುರಿತು ಚರ್ಚಿಸಲಾಗುವುದು, ದಿನಾಂಕಗಳನ್ನು ಇನ್ನೂ ಘೋಷಿಸಿಲ್ಲ ಎಂಬ ಮಾಹಿತಿ ಇದೆ.

ಜೆಡಿಯು ನಿತೀಶ್ ಕುಮಾರ್ ಅವರರೊಂದಿಗೆ ಬಿಜೆಪಿ ಮತ್ತೊಂದು ಇನ್ನಿಂಗ್ಸ್‌ಗೆ ಸಜ್ಜಾಗಿದೆಯೇ ಎಂಬ ಊಹಾಪೋಹಗಳ ಬಗ್ಗೆ ಕೇಳಿದ ಪ್ರಶ್ನೆಗೆ ಚೌಧರಿ, “ನಮ್ಮ ಮಟ್ಟದಲ್ಲಿ ಅಂತಹ ಯಾವುದೇ ವಿಷಯ ಚರ್ಚಿಸಲಾಗಿಲ್ಲ” ಎಂದು ಹೇಳಿದರು. ಇದೇ ಸಮಯದಲ್ಲಿ, ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಹಿರಿಯ ನಾಯಕ ಸುಶೀಲ್ ಕುಮಾರ್ ಮೋದಿ, “ರಾಜಕೀಯದಲ್ಲಿ ಯಾವುದೇ ಬಾಗಿಲು ಮುಚ್ಚಿಲ್ಲ, ಅಗತ್ಯ ಬಿದ್ದಾಗ ಬಾಗಿಲು ತೆರೆಯಬಹುದು” ಎಂದು ಹೇಳಿಕೆ ಕೊಡುವುದರ ಮೂಲಕ, ಪಕ್ಷದ ಹಿರಿಯ ನಾಯಕರೊಂದಿಗೆ ನಡೆಸಿದ ಚರ್ಚೆಯ ಬಗ್ಗೆ ಕೆಲವು ಸುಳಿವುಗಳನ್ನು ನೀಡಿದ್ದಾರೆ.

ಏತನ್ಮಧ್ಯೆ, ಬಿಹಾರ ಕಾಂಗ್ರೆಸ್ ನಾಯಕ ಶಕೀಲ್ ಅಹ್ಮದ್ ಖಾನ್ ಅವರು ಶನಿವಾರ ಮಧ್ಯಾಹ್ನ 2 ಗಂಟೆಗೆ ಪೂರ್ಣೆಯಾದಲ್ಲಿ, ಪಕ್ಷದ ಶಾಸಕರು ಮತ್ತು ಮಾಜಿ ಶಾಸಕರ ಸಭೆಯನ್ನು ಕರೆದಿದ್ದಾರೆ. ಈ ಸಭೆಗೂ ರಾಜ್ಯದ ಇತ್ತೀಚಿನ ರಾಜಕೀಯ ಬೆಳವಣಿಗೆಗಳಿಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.

“ಎಲ್ಲಾ ಕಾಂಗ್ರೆಸ್ ಶಾಸಕರು (ಇಂದಿನ ಮತ್ತು ಮಾಜಿ) ಮತ್ತು ಪಕ್ಷದ ಹಿರಿಯ ನಾಯಕರು ನಾಳೆ ಪೂರ್ಣೆಯಾದಲ್ಲಿ ಸಭೆ ಸೇರಿ ರಾಹುಲ್ ಗಾಂಧಿಯವರ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಜನವರಿ 29 ರಂದು ಬಿಹಾರಕ್ಕೆ ಪ್ರವೇಶಿಸಿದಾಗ ಅದಕ್ಕೆ ಸಂಬಂಧಿಸಿದ ಸಿದ್ಧತೆಗಳ ಬಗ್ಗೆ ಚರ್ಚಿಸುತ್ತಿದ್ದಾರೆ. ಆದರೆ ಈ ಸಭೆಗೂ ರಾಜ್ಯದ ಇತ್ತೀಚಿನ ರಾಜಕೀಯ ಬೆಳವಣಿಗೆಗಳಿಗೂ ಯಾವುದೇ ಸಂಬಂಧವಿಲ್ಲ ಎಂಬ ವರದಿಗಳನ್ನೂ ” ಎಂದು ಖಾನ್ ತಿಳಿಸಿದರು.

ಜನವರಿ 29ರಂದು ಯಾತ್ರೆ ರಾಜ್ಯ ಪ್ರವೇಶಿಸಲಿದ್ದು, ಅದೇ ದಿನ ಕಿಶನ್‌ಗಂಜ್‌ನಲ್ಲಿ ಮೊದಲ ಸಾರ್ವಜನಿಕ ಸಭೆ ನಡೆಯಲಿದೆ. ತದ ನಂತರ ಜನವರಿ 30 ಮತ್ತು 31 ರಂದು ಕ್ರಮವಾಗಿ ಪೂರ್ಣೆಯಾ ಮತ್ತು ಕತಿಹಾರ್‌ನಲ್ಲಿ ಎರಡು ರ್ಯಾಲಿಗಳು ನಡೆಯಲಿವೆ” ಎಂದು ಖಾನ್ ಮಾಧ್ಯಮಗಳಿಗೆ ತಿಳಿಸಿದರು.

PPeepal Media Desk

Peepal Media Desk

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು