ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಐಪಿಎಲ್ ಫೈನಲ್ ಬೆನ್ನಲ್ಲೇ ಬೆಂಕಿಗೆ ತುತ್ತಾದ ಗುಜರಾತ್ ಟೈಟಾನ್ಸ್ ಆಟಗಾರರ ಬಸ್‌: ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಗಂಡಾಂತರ

PPeepal Media

Peepal Media ವಿಜ್ಞಾನ-ತಂತ್ರಜ್ಞಾನ

• 1 ನಿಮಿಷದ ಓದು

ಐಪಿಎಲ್ ಫೈನಲ್ ಬೆನ್ನಲ್ಲೇ ಬೆಂಕಿಗೆ ತುತ್ತಾದ ಗುಜರಾತ್ ಟೈಟಾನ್ಸ್ ಆಟಗಾರರ ಬಸ್‌: ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಗಂಡಾಂತರ

ಅಹಮದಾಬಾದ್: ಐಪಿಎಲ್ 2026 ರ ಫೈನಲ್ ಪಂದ್ಯ ಮುಗಿದ ಬೆನ್ನಲ್ಲೇ ಗುಜರಾತ್ ಟೈಟಾನ್ಸ್ (GT) ತಂಡದ ಆಟಗಾರರು ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ ಭಾನುವಾರ ತಡರಾತ್ರಿ ಹಠಾತ್ ಅಗ್ನಿ ಅವಘಡ ಸಂಭವಿಸಿದೆ. ಸಮಯಪ್ರಜ್ಞೆ ಮೆರೆದ ಸಿಬ್ಬಂದಿ ತಕ್ಷಣವೇ ಎಲ್ಲಾ ಆಟಗಾರರನ್ನು ಬಸ್‌ನಿಂದ ಸುರಕ್ಷಿತವಾಗಿ ಕೆಳಗಿಳಿಸಿದ್ದರಿಂದ ಭಾರಿ ಪ್ರಮಾಣದ ಅಪಾಯವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ಮುಗಿದ ನಂತರ ಗುಜರಾತ್ ತಂಡದ ಆಟಗಾರರು ಮತ್ತು ಸಿಬ್ಬಂದಿ ಹೊಟೇಲ್‌ಗೆ ವಾಪಸ್ ಆಗುತ್ತಿದ್ದಾಗ ಈ ಘಟನೆ ನಡೆದಿದೆ. ಬಸ್‌ನಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬಸ್‌ನಲ್ಲಿ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಆಟಗಾರರನ್ನು ಕೆಳಗಿಳಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಸ್ಟಾರ್ ಆಟಗಾರರು ಸುಮಾರು ಒಂದು ಗಂಟೆಗಳ ಕಾಲ ರಸ್ತೆಯಲ್ಲೇ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ತದನಂತರ ಬದಲಿ ಬಸ್ ವ್ಯವಸ್ಥೆ ಮಾಡಿ ಆಟಗಾರರನ್ನು ಅವರು ತಂಗಿದ್ದ ಹೊಟೇಲ್‌ಗೆ ಸುರಕ್ಷಿತವಾಗಿ ಕರೆದೊಯ್ಯಲಾಯಿತು.

ಆರ್​ಸಿಬಿಗೆ ಒಲಿದ ಐಪಿಎಲ್ 2026 ಟ್ರೋಫಿ: ಇದಕ್ಕೂ ಮುನ್ನ ಭಾನುವಾರ ರಾತ್ರಿ ನಡೆದಿದ್ದ ಐಪಿಎಲ್ 2026 ರ ಮಹಾ ಫೈನಲ್ ಹಣಾಹಣಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿರುದ್ಧ ಗುಜರಾತ್ ಟೈಟಾನ್ಸ್ 5 ವಿಕೆಟ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ ತಂಡ, ಆರ್​ಸಿಬಿ ಪರ ರಸಿಖ್ ಸಲಾಮ್ ದಾರ್ (3/27), ಭುವನೇಶ್ವರ್ ಕುಮಾರ್ (2/29) ಮತ್ತು ಜೋಶ್ ಹೇಜಲ್‌ವುಡ್ (2/37) ಅವರ ಶಿಸ್ತುಬದ್ಧ ಬೌಲಿಂಗ್ ದಾಳಿಗೆ ತತ್ತರಿಸಿ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 155 ರನ್ ಗಳಿಸಲಷ್ಟೇ ಶಕ್ತವಾಗಿತ್ತು. ಗುಜರಾತ್ ಪರ ವಾಷಿಂಗ್ಟನ್ ಸುಂದರ್ (37 ಎಸೆತಗಳಲ್ಲಿ 50 ರನ್ ನಾಟೌಟ್) ಅರ್ಧಶತಕ ಗಳಿಸಿ ತಂಡಕ್ಕೆ ಆಸರೆಯಾಗಿದ್ದರು.

ಬಳಿಕ 156 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ತಂಡ, ‘ಕಿಂಗ್’ ವಿರಾಟ್ ಕೊಹ್ಲಿ (42 ಎಸೆತಗಳಲ್ಲಿ 9 ಬೌಂಡರಿ, 3 ಸಿಕ್ಸರ್ ಸಹಿತ 75 ರನ್ ನಾಟೌಟ್) ಅವರ ಜವಾಬ್ದಾರಿಯುತ ಬ್ಯಾಟಿಂಗ್ ಬಲದಿಂದ 18 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು. ಮಧ್ಯಮ ಕ್ರಮಾಂಕದಲ್ಲಿ ವೆಂಕಟೇಶ್ ಅಯ್ಯರ್ (16 ಎಸೆತಗಳಲ್ಲಿ 32 ರನ್) ವೇಗದ ಕೊಡುಗೆ ನೀಡಿದರು. ಅಜೇಯ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ (Player of the Match) ಪ್ರಶಸ್ತಿಗೆ ಭಾಜನರಾದರು. ಸೋಲಿನ ಬೆನ್ನಲ್ಲೇ ಬಸ್ ಅಗ್ನಿ ಅವಘಡಕ್ಕೆ ತುತ್ತಾಗಿದ್ದು ಗುಜರಾತ್ ತಂಡದ ಆಟಗಾರರನ್ನು ಮತ್ತಷ್ಟು ಆತಂಕಕ್ಕೆ ದೂಡಿತ್ತು.

PPeepal Media

Peepal Media

Peepal Media · ವಿಜ್ಞಾನ-ತಂತ್ರಜ್ಞಾನ ವಿಭಾಗ

ಸಂಬಂಧಿತ ಸುದ್ದಿಗಳು