ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಾಂಖೆಡೆ ಕ್ರೀಡಾಂಗಣ: ಭಾವುಕರಾದ ರೋಹಿತ್ ಶರ್ಮಾ ಕುಟುಂಬ ಸದಸ್ಯರು

P

Peepal Media • ವಿಜ್ಞಾನ-ತಂತ್ರಜ್ಞಾನ

• 1 ನಿಮಿಷದ ಓದು

ವಾಂಖೆಡೆ ಕ್ರೀಡಾಂಗಣ: ಭಾವುಕರಾದ ರೋಹಿತ್ ಶರ್ಮಾ ಕುಟುಂಬ ಸದಸ್ಯರು

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಶುಕ್ರವಾರ ಮುಂಬೈ ಕ್ರಿಕೆಟ್ ಅಸೋಸಿಯೇಷನ್ ​​ಆಶ್ರಯದಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆಗೊಂಡಿತು.

ಈ ಸಂದರ್ಭದಲ್ಲಿ ಹಿಟ್‌ಮ್ಯಾನ್‌ನ ಕುಟುಂಬ ಸದಸ್ಯರು ಭಾವುಕರಾಗಿದ್ದರು. ಅವರ ಕಣ್ಣಾಲಿಗಳು ತುಂಬಿ ಬಂದಿದ್ದವು. ವೇದಿಕೆಯಲ್ಲಿ ಮಾತನಾಡುವಾಗ ರೋಹಿತ್ ಶರ್ಮಾ ಕೂಡ ಕೆಲವು ಕ್ಷಣ ಕಣ್ಣೀರು ಹಾಕುತ್ತಾ ಕಾಣಿಸಿಕೊಂಡರು. ಅವರು ತನ್ನ ಹೆತ್ತವರು, ಹೆಂಡತಿ ಮತ್ತು ಸಹೋದರನಿಗೆ ಧನ್ಯವಾದ ಹೇಳಿದರು.

“ಇಂದು ನನ್ನ ಕುಟುಂಬ – ನನ್ನ ಹೆತ್ತವರು, ಹೆಂಡತಿ ಮತ್ತು ಸಹೋದರ – ಇಲ್ಲಿರುವುದು ನನ್ನ ಪಾಲಿಗೆ ಈ ದಿನವನ್ನು ಇನ್ನಷ್ಟು ವಿಶೇಷವಾಗಿಸಿದೆ. ಅವರು ನನಗಾಗಿ ಮಾಡಿದ ತ್ಯಾಗಗಳಿಗೆ ನಾನು ಕೃತಜ್ಞ. ಇಂದು ನಾನು ಏನಾಗಿದ್ದೇನೆಯೋ ಅದನ್ನು ಸಾಧಿಸುತ್ತೇನೆ ಎಂದು ಊಹಿಸಿರಲಿಲ್ಲ. ಬಾಲ್ಯದಲ್ಲಿ ಮುಂಬೈ ಮತ್ತು ಟೀಮ್ ಇಂಡಿಯಾ ಪರ ಆಡುವ ಕನಸು ಕಂಡಿದ್ದೆ.

ಇವತ್ತು ಶ್ರೇಷ್ಠ ಕ್ರಿಕೆಟಿಗರ ಪಟ್ಟಿಯಲ್ಲಿ ನನ್ನ ಹೆಸರು ಸೇರ್ಪಡೆಗೊಂಡಿದ್ದಕ್ಕೆ ನನಗಾಗಿರುವ ಸಂತೋಷವನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ. ನಾನು ಇನ್ನೂ ಆಡುತ್ತಿರುವುದೇ ನನ್ನ ಪಾಲಿಗೆ ವಿಶೇಷ. ನಾನು ಕ್ರಿಕೆಟ್ಟಿನ ಎರಡು ಸ್ವರೂಪಗಳಿಂದ ಮಾತ್ರ ನಿವೃತ್ತಿ ಹೊಂದಿದ್ದೇನೆ. ಇನ್ನೂ ಒಂದು ಸ್ವರೂಪದಲ್ಲಿ ಆಡುತ್ತಿದ್ದೇನೆ. ವಾಂಖೆಡೆ ಅದ್ಭುತ ಕ್ರೀಡಾಂಗಣ. “ನನಗೆ ಇದರ ಮೇಲೆ ತುಂಬಾ ಪ್ರೀತಿ ಇದೆ” ಎಂದು ರೋಹಿತ್ ಶರ್ಮಾ ಹೇಳಿದರು.

ಈ ಸಂದರ್ಭದಲ್ಲಿ ಅವರು ಭಾರತದ ಮಾಜಿ ನಾಯಕ ಅಜಿತ್ ವಾಡೇಕರ್ ಮತ್ತು ಬಿಸಿಸಿಐ ಮಾಜಿ ಅಧ್ಯಕ್ಷ ಶರದ್ ಪವಾರ್ ಅವರಿಗೆ ಧನ್ಯವಾದ ಅರ್ಪಿಸಿದರು. ನಂತರ, ಹಿಟ್‌ಮ್ಯಾನ್‌ನ ಪೋಷಕರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ರೋಹಿತ್ ಶರ್ಮಾ ಅವರ ಹೆಸರಿನ ಸ್ಟ್ಯಾಂಡನ್ನು ಲೋಕಾರ್ಪಣೆ ಮಾಡಿದರು.

P

Peepal Media

Peepal Media · ವಿಜ್ಞಾನ-ತಂತ್ರಜ್ಞಾನ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version