ಹೊಸದಿಲ್ಲಿ, ನವೆಂಬರ್ 28: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ (ಪಿಪಿಪಿ) ವ್ಯವಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ಪ್ಲಾಜಾಗಳ ಮೂಲಕ ಸರಕಾರವು ಡಿಸೆಂಬರ್ 2000ರಿಂದ 1.44 ಲಕ್ಷ ಕೋಟಿ ರೂ.ಗಳನ್ನು ಟೋಲ್ ತೆರಿಗೆಯಾಗಿ ಸಂಗ್ರಹಿಸಿದೆ ಎಂದು ಸಚಿವ ನಿತಿನ್ ಗಡ್ಕರಿ ಬಹಿರಂಗಪಡಿಸಿದ್ದಾರೆ.
ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತವಾಗಿ ಉತ್ತರಿಸಿದರು.
ಪ್ರಸ್ತುತ ಜಾರಿಯಲ್ಲಿರುವ ಫಾಸ್ಟ್ಯಾಗ್ ಜೊತೆಗೆ ಯಾವುದೇ ಅಡೆತಡೆಯಿಲ್ಲದೆ ಮುಂದುವರೆಯಲು ಅನುಕೂಲವಾಗುವಂತೆ ಎಲೆಕ್ಟ್ರಾನಿಕ್ ಟೆಕ್ನಾಲಜಿ ಕಲೆಕ್ಷನ್ (ಇಟಿಸಿ) ತಂತ್ರಜ್ಞಾನದ ಅಳವಡಿಕೆಗೆ ಚಾಲನೆ ನೀಡಲಾಗಿದೆ ಎಂದರು. ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್ (ಜಿಎನ್‌ಎಸ್‌ಎಸ್) ಆಧಾರಿತ ವ್ಯವಸ್ಥೆಯನ್ನು ಪ್ರಸ್ತುತ ಯಾವುದೇ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಳವಡಿಸಲಾಗುತ್ತಿಲ್ಲ ಎಂದು ಅವರು ಹೇಳಿದರು.
ಆ ವ್ಯವಸ್ಥೆಯಲ್ಲಿ ಅದುವರೆಗೆ ರಾಷ್ಟ್ರೀಯ ಹೆದ್ದಾರಿ ಅಥವಾ ಎಕ್ಸ್ ಪ್ರೆಸ್ ವೇಯಲ್ಲಿ ವಾಹನ ಸಂಚರಿಸುವ ವಾಸ್ತವ ದೂರದ ಆಧಾರದ ಮೇಲೆ ಶುಲ್ಕ ಸಂಗ್ರಹಿಸಲಾಗುತ್ತಿತ್ತು ಆದರೆ ಈಗಿನ ವ್ಯವಸ್ಥೆ ಪ್ರಕಾರ ಪ್ಲಾಜಾ ಯೋಜನೆಯ ಪ್ರಯಾಣದ ದೂರದ ಆಧಾರದ ಮೇಲೆ ಶುಲ್ಕ ಸಂಗ್ರಹಿಸಲಾಗುತ್ತದೆ ಎಂದು ಹೇಳಿದರು.