ಶಿವಮೊಗ್ಗ: ‘ಮುಂದಿನ ಶೈಕ್ಷಣಿಕ ವರ್ಷದೊಳಗೆ ಸರ್ಕಾರಿ ಶಾಲೆಗಳಿಗೆ 10,800 ಶಿಕ್ಷಕರ ನೇಮಕ ಹಾಗೂ ಅನುದಾನಿತ ಶಾಲೆಗಳಿಗೆ ಶಿಕ್ಷಕರ ನೇಮಕಾತಿಗೆ ಕ್ರಮವಹಿಸಲಾಗುವುದು’ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೋಮವಾರ ಇಲ್ಲಿ ಹೇಳಿದರು. ಗಣರಾಜ್ಯೋತ್ಸವ ನಿಮಿತ್ತ ಧ್ವಜಾರೋಹಣ ನೆರವೇರಿಸಿದ ಅವರು, ‘5,000 ಸರ್ಕಾರಿ ಶಾಲೆಗಳಲ್ಲಿ ₹ 160 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್, ವಿಜ್ಞಾನ ಪ್ರಯೋಗಾಲಯ ಅಳವಡಿಸಲಾಗುವುದು. ಮೂಲಸೌಕರ್ಯಕ್ಕಾಗಿ ₹ 500 ಕೋಟಿ ವ್ಯಯಿಸಲಾಗುತ್ತಿದೆ’ ಎಂದರು.
‘ಎಲ್.ಕೆ.ಜಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೂ ಉಚಿತ ಪಠ್ಯಪುಸ್ತಕ ಹಾಗೂ ಉಚಿತ ನೋಟ್‌ಬುಕ್ ನೀಡುವ ಪ್ರಸ್ತಾವವೂ ಸರ್ಕಾರದ ಹಂತದಲ್ಲಿದೆ’ ಎಂದು ತಿಳಿಸಿದರು.
