ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಆ ಮಹಿಳೆಯ ಅಶ್ಲೀಲ ವಿಡಿಯೋಗಳನ್ನು ಪೆನ್ಡ್ರೈವ್ ಒಳಗಡೆ ಸಂಗ್ರಹಿಸಿಟ್ಟುಕೊಂಡಿದ್ದ ಪ್ರಕರಣದಲ್ಲಿ ಬಂಧಿತನಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಸೋಮವಾರ ಆದೇಶ ಹೊರಡಿಸಿದೆ.
ಎರಡನೇ ಭಾರಿಗೆ ವಶಕ್ಕೆ ಪಡೆದಿದ್ದ ಎಸ್ಐಟಿ ಅಧಿಕಾರಿಗಳ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಸೋಮವಾರ ಹಾಜರುಪಡಿಸಿದ್ದರು. ಪ್ರಜ್ವಲ್ ಮೇಲೆ ಇನ್ನು ಎರಡು ಅತ್ಯಾಚಾರ ಪ್ರಕರಣಗಳ ತನಿಖೆ ಬಾಕಿ ಇದೆ.
ಇದೀಗ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಮುಂದಿನ 14 ದಿನಗಳ ವರೆಗೆ ಅಂದರೆ ಜೂನ್ 24ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.
ಅಪಹರಣ ಪ್ರಕರಣ ಸಂಬಂಧ ಹನ್ನೊಂದು ಜೈಲಿನಲ್ಲಿದ್ದು ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಎಚ್.ಡಿ.ರೇವಣ್ಣ ಅವರಿದ್ದ ಸೆಲ್ ಅನ್ನೇ ಪ್ರಜ್ವಲ್ ರೇವಣ್ಣ ಅವರಿಗೂ ನೀಡಲಾಗಿದೆ ಎಂದು ತಿಳಿದು ಬಂದಿದೆ. ಅಪ್ಪನಿದ್ದ ಜೈಲಲ್ಲಿ ಮಗ ಮುಂದಿನ ಎರಡು ವಾರ ಕಳೆಯಲಿದ್ದಾರೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಲೋಕಸಭೆಯ ಮತದಾನದ ಮರುದಿನವೇ ರೇವಣ್ಣ ಜರ್ಮನಿಗೆ ಹೋಗಿ ತಲೆಮರೆಸಿಕೊಂಡಿದ್ದರು. ಅವರ ಬಗ್ಗೆ ಸಾಕಷ್ಟು ಪ್ರತಿರೋಧ ಕೇಳಿ ಬಂದಿದ್ದರಿಂದ ಭಾರತಕ್ಕೆ ಮರಳಿದ್ದ ಪ್ರಜ್ವಲ್ನನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರು.