Home ರಾಜಕೀಯ ಮುಂದಿನ ಚುನಾವಣೆಯಲ್ಲಿ 141 ಸೀಟು ಗ್ಯಾರೆಂಟಿ – ಡಿ.ಕೆ ಶಿ

ಮುಂದಿನ ಚುನಾವಣೆಯಲ್ಲಿ 141 ಸೀಟು ಗ್ಯಾರೆಂಟಿ – ಡಿ.ಕೆ ಶಿ

0

ಹಾವೇರಿ : ಜನಸೇವೆಯಲ್ಲಿ ಸಾರ್ಥಕ ಸಾವಿರ ದಿನ, ಭೂ ಗ್ಯಾರಂಟಿ (Bhu guarantee) ಸಮರ್ಪಣಾ ಸಮಾವೇಶ  ಅದ್ದೂರಿಯಾಗಿ ನಡೆದಿದೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರು ಮಾತನಾಡಿ ಕಾಂಗ್ರೆಸ್ ಸರ್ಕಾರವು ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಪಂಚ ಗ್ಯಾರಂಟಿಗಳ ಜತೆಗೆ ಆರನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿ ನೀಡುತ್ತಿರುವುದು ನಮಗೆ ಹಮ್ಮೆಯ ವಿಚಾರ ಎಂದ್ರು

ಕೇಂದ್ರ ಸರ್ಕಾರ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ, ಎತ್ತಿನಹೊಳೆಗೆ ಅನುಮತಿ ಕೊಟ್ಟರೆ ಏಳನೇ ಗ್ಯಾರಂಟಿಯಾಗಿ ನೀರಿನ ಗ್ಯಾರಂಟಿ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದರು.

“ನಾನು ಚುನಾವಣೆಗೆ ಬಂದಾಗ ಒಂದು ಮಾತು ಹೇಳಿದ್ದೆ. ಕಮಲ ಕೆರೆಯಲ್ಲಿದ್ದರೆ ಚಂದ, ತೆನೆ ಹೊಲದಲ್ಲಿದ್ದರೆ ಚಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚಂದ. ಈ ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿರುವ ಕಾರಣಕ್ಕೆ ಪಂಚ ಗ್ಯಾರಂಟಿ ನೀಡಿ, ಆರನೇ ಗ್ಯಾರಂಟಿ ಭೂಮಿ ಗ್ಯಾರಂಟಿ ನೀಡುತ್ತಿದ್ದೇವೆ. ಭೂ ದಾಖಲೆ ಇಲ್ಲದ 1,11,111 ಜನರಿಗೆ ಪೋಡಿ ಮಾಡಿ, ಖಾತಾ ಮಾಡಿ ದಾಖಲೆ ನೀಡಲಾಗಿದೆ. ಆಮೂಲಕ ನಿಮ್ಮ ಮುಂದಿನ ಪೀಳಿಗೆಗೆ ಆಸ್ತಿ ದಾಖಲೆ ಕೊಟ್ಟ ಏಕೈಕ ಸರ್ಕಾರ ಈ ಕಾಂಗ್ರೆಸ್ ಸರ್ಕಾರ” ಎಂದು ತಿಳಿಸಿದರು.

ಮುಂದಿನ ಚುನಾವಣೆಯಲ್ಲಿ ನಮಗೆ 141 ಸೀಟು ಬರಲಿವೆ, ಬರೆದಿಟ್ಟುಕೊಳ್ಳಿ

“ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಒದಗಿಸಲು ಇಂಧನ ಇಲಾಖೆಯಿಂದ ವರ್ಷಕ್ಕೆ 20 ಸಾವಿರ ಕೋಟಿ ಹಣ ವೆಚ್ಚ ಮಾಡಲಾಗುತ್ತಿದೆ. ಇಂತಹ ಐಸಿಹಾಸಿಕ ಕಾರ್ಯಕ್ರಮಗಳನ್ನು ನಾವು ನೀಡುತ್ತಿದ್ದೇವೆ. ಈ ಬಾರಿ ಚುನಾವಣೆಯಲ್ಲಿ ನಮಗೆ 136 ಸೀಟುಗಳು ಬಂದಿದ್ದವು, ಮುಂದಿನ ಚುನಾವಣೆಯಲ್ಲಿ ನಮಗೆ 141 ಸೀಟುಗಳು ಬರಲಿವೆ. ನನ್ನ ಈ ಮಾತನ್ನು ಬರೆದಿಟ್ಟುಕೊಳ್ಳಿ ಎಂದರು

You cannot copy content of this page

Exit mobile version