Sunday, August 10, 2025

ಸತ್ಯ | ನ್ಯಾಯ |ಧರ್ಮ

ಚಿಕ್ಕಮಗಳೂರಿನಲ್ಲಿ 15 ವರ್ಷದ ಬಾಲಕ ಹೃದಯಾಘಾತಕ್ಕೆ ಸಾ*ವು

ಚಿಕ್ಕಮಗಳೂರು : ರಾಜ್ಯದಲ್ಲಿ ಹೃದಯಸ್ತಂಬನ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಲೇ ಇದ್ದು, ಇದೀಗ ಹೃದಯಾಘಾತಕ್ಕೆ (Heart Attack) ಚಿಕ್ಕಮಗಳೂರು (Chikkamagaluru) ಜಿಲ್ಲೆ ಮೂಡಿಗೆರೆ ತಾಲೂಕಿನ ಬಾನಳ್ಳಿಯ 15 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಮೃತ ಬಾಲಕನನ್ನು ಪ್ರೀತಮ್ (15) ಎಂದು ಗುರುತಿಸಲಾಗಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ವೇಳೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ಈ ಬಗ್ಗೆ ಯಾರಿಗಾದರೂ ಹೇಳಬೇಕು ಅನ್ನುವಷ್ಟರಲ್ಲಿ ದಿಢೀರ್ ಆಗಿ ಕುಸಿದು ಬಿದ್ದಿದ್ದಾನೆ.

ಕೂಡಲೇ ಸ್ಥಳೀಯರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ, ಈ ವೇಳೆ ಪರೀಕ್ಷಿಸಿದ ವೈದ್ಯರು ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಸದ್ಯ ಬಾಲಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಈ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಮೃತ ದುರ್ದೈವಿಯನ್ನು 37 ವರ್ಷದ ಮಿಲಿಂದ್ ಕುಲಕರ್ಣಿ ಎಂದು ಗುರುತಿಸಲಾಗಿದೆ. ಈ ಆತಂಕಕಾರಿ ಘಟನೆಯ ದೃಶ್ಯ ಜಿಮ್ ನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು,ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ವೇಳೆ ಮಿಲಿಂದ್ ಕುಸಿದುಬಿದ್ದ ಕೂಡಲೇ ಜಿಮ್ ನಲ್ಲಿದ್ದ ಇತರೇ ಯುವಕರು ಆತನ ಬಳಿಗೆ ಹೋಗಿ ಏನಾಗಿದೆ ಎಂಬುದನ್ನು ಪರೀಕ್ಷಿಸಿದ್ದಾರೆ. ಆ ಬಳಿಕ ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆತನನ್ನು ಪರೀಕ್ಷೆಗೆ ಒಳಪಡಿಸಿದ ವೈದ್ಯರು, ಆತ ಅದಾಗಲೇ ಮೃತಪಟ್ಟಿರೋದಾಗಿ ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page