Friday, June 20, 2025

ಸತ್ಯ | ನ್ಯಾಯ |ಧರ್ಮ

ಏರ್ ಇಂಡಿಯಾ ವಿಮಾನ ದುರಂತ: ಈಗಾಗಲೇ 187 ಮೃತದೇಹಗಳು ಕುಟುಂಬಸ್ಥರಿಗೆ ಹಸ್ತಾಂತರ

ಅಹಮದಾಬಾದ್ ನ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಈಗಾಗಲೇ 187 ಮೃತದೇಹಗಳನ್ನು ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸತ್ತವರ ಡಿಎನ್ಎ ಪರೀಕ್ಷೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ 210 ದೇಹಗಳನ್ನು ಡಿಎನ್ಎ ಪರೀಕ್ಷೆ ಮೂಲಕ ಗುರುತಿಸಲಾಗಿದೆ.

ಇನ್ನುಳಿದ ಮೃತ ದೇಹಗಳನ್ನು ಗುರುತಿಸಿ ಹಸ್ತಾಂತರಿಸುವ ಪ್ರಕ್ರಿಯೆ ವಿವಿಧ ಹಂತಗಳಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಐದು ಜನರ ಡಿಎನ್‌ಎ ಪರೀಕ್ಷೆಗಳು ಇನ್ನೂ ನಡೆಯುತ್ತಿವೆ ಎಂದು ಅವರು ಹೇಳಿದರು.

15 ಶವಗಳನ್ನು ಗುರುತಿಸಲು ಕುಟುಂಬ ಸದಸ್ಯರಿಂದ ಹೆಚ್ಚುವರಿ ಮಾದರಿಗಳನ್ನು ಸಂಗ್ರಹಿಸಬೇಕಾಗಿದೆ ಎಂದು ಅವರು ಹೇಳಿದರು. ಇನ್ನೂ 10 ಜನರ ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸುವ ಪ್ರಕ್ರಿಯೆ ಮುಂದುವರೆದಿದೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಇಬ್ಬರು ವಿದೇಶಿಯರ ಶವಗಳನ್ನ ಅವರ ದೇಶಗಳಿಗೆ ಕಳುಹಿಸಲಾಗಿದೆ. 11 ಶವಗಳನ್ನ ಗುಜರಾತ್’ನ ಹೊರಗಿನ ಇತರ ರಾಜ್ಯಗಳಿಗೆ ಕಳುಹಿಸಲಾಗಿದೆ. ಡಿಎನ್‌ಎ ಪರೀಕ್ಷೆಗಳ ಮೂಲಕ ಗುರುತಿಸಲಾದ 202 ಶವಗಳಲ್ಲಿ ಹೆಚ್ಚಿನವುಗಳನ್ನು ಆಂಬ್ಯುಲೆನ್ಸ್’ಗಳಲ್ಲಿ ಗುಜರಾತ್ನ ವಿವಿಧ ಭಾಗಗಳಿಗೆ ರಸ್ತೆ ಮೂಲಕ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page