Tuesday, February 24, 2026

ಸತ್ಯ | ನ್ಯಾಯ |ಧರ್ಮ

2.80 ಲಕ್ಷ ಹುದ್ದೆಗಳು ಖಾಲಿ – ನೇಮಕಾತಿಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ

ಧಾರವಾಡ: ರಾಜ್ಯದಲ್ಲಿ 2.80 ಲಕ್ಷ ಹುದ್ದೆಗಳು ಖಾಲಿ ಇದ್ದರೂ ನೇಮಕಾತಿಗಳನ್ನ ಆರಂಭಿಸದೇ  ವಿಳಂಬ ಧೋರಣೆ ತಾಳುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಸಾವಿರಾರು ಉದ್ಯೋಗಾಕಾಂಕ್ಷಿಗಳು ಧಾರವಾಡದಲ್ಲಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದು ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಅಲ್ಲದೇ ವಿಪಕ್ಷ ನಾಯಕರು ಸಹ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘಟನೆ ವತಿಯಿಂದ ಧಾರವಾಡದಲ್ಲಿ ನಡೆಯುತ್ತಿರುವ ಹೋರಾಟ ತೀವ್ರಗೊಂಡಿದ್ದು ಪ್ರತಿಭಟನೆಗೆ ಬಿಜೆಪಿ ನಾಯಕರು ಸಾಥ್ ನೀಡಿದ್ದಾರೆ. ನಗರದ ಶ್ರೀನಗರ ವೃತ್ತದಿಂದ ಜುಬಿಲಿ ವೃತ್ತಕ್ಕೆ ಜಮಾಯಿಸಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳು ತಕ್ಷಣ ನೇಮಕಾತಿಗಳನ್ನ ಪ್ರಾರಂಭಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ದ  ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ಶಾಸಕ ಅರವಿಂದ ಬೆಲ್ಲದ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಭಾಗವಹಿಸಿದ್ದಾರೆ. ಯುವಜನತೆ ಹೋರಾಟದ ಕಾವು ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿದ್ದು ನೇಮಕಾತಿ ಆರಂಭಿಸುವವರೆಗೂ ಹೋರಾಟ ನಿಲ್ಲಲ್ಲ ಎಂದು ಸರ್ಕಾರಕ್ಕೆ ಖಡಕ್ ವಾರ್ನಿಂಗ್ ನೀಡಿದ್ದಾರೆ.   ಮಧ್ಯಾಹ್ನ ಊಟಕ್ಕೂ ತೆರಳದೆ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ನೀರು ಬಿಸ್ಕೆಟ್ ನೀಡುವ ಮೂಲಕ ಸ್ಥಳೀಯರೂ ಸಾಥ್ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page