ಬೆಂಗಳೂರು: ರಾಜ್ಯದಲ್ಲಿನ(state) 2 ಲಕ್ಷಕ್ಕೂ ಅಧಿಕ ಅರ್ಹತಾ ಮಾನದಂಡಗಳನ್ನು ಉಲ್ಲಂಘಿಸಿ ಪಡೆದಿದ್ದ ಬಿಪಿಎಲ್ ಕಾರ್ಡ್(bpl card) ಗಳನ್ನು ಆಹಾರ ಇಲಾಖೆ(Food Department) ರದ್ದುಗೊಳಿಸಿದೆ. ಸುಮಾರು 4.80 ಲಕ್ಷ ಅನರ್ಹ ಫಲಾನುಭವಿಗಳು ಸರ್ಕಾರದ ಅನ್ನಭಾಗ್ಯ ಯೋಜನೆಯಿಂದ ಹೊರಬಿದ್ದಿದ್ದಾರೆ. ನಕಲಿ ಕಾರ್ಡ್‌ಗಳ ಪತ್ತೆ ಮತ್ತು ಪಡಿತರ ಸೋರಿಕೆ ತಡೆಯುವ ಉದ್ದೇಶದಿಂದ ಇ-ಕೆವೈಸಿ ಕಡ್ಡಾಯಗೊಳಿಸಲಾಗಿದೆ. ರದ್ದಾದ ಅರ್ಹ ಫಲಾನುಭವಿಗಳು 45 ದಿನಗಳೊಳಗೆ ಸಂಬಂಧಪಟ್ಟ ತಹಶೀಲ್ದಾರ್‌ಗೆ ದಾಖಲೆಗಳೊಂದಿಗೆ ಮನವಿ ಸಲ್ಲಿಸಿ ಕಾರ್ಡ್ ಪುನಃ ಪಡೆಯಲು ಅವಕಾಶವನ್ನು ಕಲ್ಪಿಸಲಾಗಿದೆ.ಸರ್ಕಾರದ ಮಾನದಂಡಗಳ ಪ್ರಕಾರ, ಸುಮಾರು 7.76 ಲಕ್ಷ ಪಡಿತರ ಚೀಟಿಗಳು ಅನರ್ಹ ಎಂದು ಪಟ್ಟಿ ಮಾಡಲಾಗಿದೆ. ಕುಟುಂಬ ತಂತ್ರಾಂಶ’ದ ಅನ್ವಯ 13.87 ಲಕ್ಷಕ್ಕೂ ಅಧಿಕ ಕಾರ್ಡ್‌ಗಳು ಅನರ್ಹರ ಕೈಯಲ್ಲಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ, ಅನರ್ಹ ಕಾರ್ಡ್‌ಗಳನ್ನು ರದ್ದುಪಡಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸಿದೆ.
ಈ ಸಂದರ್ಭದಲ್ಲಿ ಅರ್ಹ ಫಲಾನುಭವಿಗಳ ಕಾರ್ಡ್‌ಗಳು ಕೂಡ ರದ್ದಾಗುವ ಸಾಧ್ಯತೆ ಇರುತ್ತದೆ. ಅಂತಹ ಸಂದರ್ಭದಲ್ಲಿ ಆತಂಕಪಡುವ ಅಗತ್ಯವಿಲ್ಲ. ತಮ್ಮ ಕಾರ್ಡ್ ಅರ್ಹತೆಯಿದ್ದರೂ ರದ್ದಾಗಿದ್ದರೆ, ಅಂತಹ ನಾಗರಿಕರು 45 ದಿನಗಳ ಒಳಗೆ ಅಗತ್ಯ ದಾಖಲೆಗಳೊಂದಿಗೆ ತಮ್ಮ ತಾಲೂಕಿನ ತಹಶೀಲ್ದಾರ್ ಕಚೇರಿಗೆ ಮನವಿ ಸಲ್ಲಿಸಬಹುದು ಎಂದು ಇಲಾಖೆ ಸ್ಪಷ್ಟಪಡಿಸಿದೆ. ರಾಜ್ಯದಲ್ಲಿ ಇನ್ನೂ 6,16,196 ಕಾರ್ಡ್‌ದಾರರು ಇ-ಕೆವೈಸಿ ಮಾಡಿಸಿಲ್ಲ. ಹೊರ ರಾಜ್ಯಗಳಿಂದ ಬಂದ ಸುಮಾರು 57,864 ಮಂದಿ ನಕಲಿ ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿರುವುದು ಪತ್ತೆಯಾಗಿದೆ. ಆದಾಯ ತೆರಿಗೆ ಪಾವತಿಸುವವರು, ಸರ್ಕಾರಿ ನೌಕರರು, 7.5 ಎಕರೆಗಿಂತ ಹೆಚ್ಚು ಕೃಷಿ ಭೂಮಿ ಹೊಂದಿರುವವರು ಹಾಗೂ ವಾರ್ಷಿಕ 1.20 ಲಕ್ಷ ರೂಪಾಯಿಗಿಂತ ಹೆಚ್ಚು ಆದಾಯ ಹೊಂದಿರುವ ಕುಟುಂಬಗಳು ಬಿಪಿಎಲ್ ಕಾರ್ಡ್‌ಗೆ ಅರ್ಹರಲ್ಲ.