ಭುವನೇಶ್ವರ: ಒಡಿಶಾದ ಬೌದ್ ಜಿಲ್ಲೆಯಲ್ಲಿ ಕೆಂಪು ಬಂಡುಕೋರರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಕಾಳಗದಲ್ಲಿ ಕನಿಷ್ಠ ಇಬ್ಬರು ಮಾವೋವಾದಿಗಳು ಗುರುವಾರ ಮುಂಜಾನೆ ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾವೋವಾದಿಗಳು ಮತ್ತು ಒಡಿಶಾದ ಎಲೈಟ್ ಸ್ಪೆಷಲ್ ಆಪರೇಷನ್ ಗ್ರೂಪ್ (ಎಸ್‌ಒಜಿ) ಸಿಬ್ಬಂದಿ ನಡುವೆ ಕಾಂಟಮಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಪರ್ಹೆಲ್ ಮೀಸಲು ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾರ್ಯಾಚರಣೆ ಸ್ಥಳದಿಂದ ಮಾವೋವಾದಿಗಳ ಎರಡು ಮೃತದೇಹಗಳು, ಶಸ್ತ್ರಾಸ್ತ್ರಗಳು, ಗ್ರೆನೇಡ್‌ಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಗುರುವಾರ ಬೆಳಗಿನ ಜಾವದವರೆಗೂ ಕಾರ್ಯಾಚರಣೆ ನಡೆಯಿತು.