ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಕ್ಕುಂದ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ,ವಿದ್ಯಾರ್ಥಿಗಳ ಜೊತೆಗೆ ಒಟ್ಟಾಗಿ ಕುಳಿತು ಬಿಸಿಯೂಟ ಸೇವಿಸಿದ್ದಾರೆ.ಈ ವೇಳೆ ಶಿಕ್ಷಕರ ನೇಮಕಾತಿಯ ಕುರಿತು ಮಧು ಬಂಗಾರಪ್ಪ ಸಿಹಿ ಸುದ್ದಿ ಕೊಟ್ಟಿದ್ದಾರೆ.
ರಾಜ್ಯದಲ್ಲಿ ಒಳಮೀಸಲಾತಿ ಸಮೀಕ್ಷೆ ನಡೆಯುತ್ತಿದ್ದು,ಈ ಸರ್ವೇ ಪೂರ್ಣಗೊಳ್ಳುತ್ತಿದ್ದಂತೆ,ರಾಜ್ಯದ ಸರ್ಕಾರಿ ಶಾಲೆಗಳು,ಅನುದಾನೂತ ಶಾಲೆಗಳು ಮತ್ತು ಕಾಲೇಜುಗಳಿಗೆ ಖಾಲಿಯಿರುವ 20 ಸಾವಿರ ಶಿಕ್ಷರ ನೇಮಕಾತಿ ಮಾಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಇದೇ ವೇಳೆ ನೂತನ ಕೊಠಡಿಗಳ ಉದ್ಘಾಟನೆ ಮಾಡಿ ಮಾತನಾಡಿದ ಸಚಿವ ಮಧು ಬಂಗಾರಪ್ಪ,ನಾನು ಧಾರ್ಮಿಕ ಕಾರ್ಯಗಳಿಗೆ ಅಥವಾ ದೇವಸ್ಥಾನದ ಕಾರ್ಯಗಳಿಗೆ ಅನುದಾನ ನೀಡುವುದು ವಿರಳ.ಆದ್ರೆ ವಿದ್ಯೆಯ ವಿಚಾರದಲ್ಲಿ ಹೆಚ್ಚು ಅನುದಾನ ನೀಡುತ್ತೇನೆ ಎಂದಿದ್ದಾರೆ. ಹೀಗಾಗಿ ತಮ್ಮ ಶಕ್ತಿ ಮೀರಿ ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ನೀಡಲು ಮುಂದಾಗಿರುವುದಾಗಿ ಹೇಳಿದ್ದಾರೆ.
ರಾಜ್ಯದ 46 ಸಾವಿರ ಸರ್ಕಾರಿ ಶಾಲೆಗಳ 57 ಲಕ್ಷ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ ಮಾಡಲಾಗುತ್ತಿದ್ದು,ನೀಟ್, ಸಿ.ಇ.ಟಿ ಪರೀಕ್ಷೆಗಳಲ್ಲಿ ಬಡ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಲಿ ಎಂದು 25 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಕೋಚಿಂಗ್ ನೀಡಲಾಗುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.