Monday, July 28, 2025

ಸತ್ಯ | ನ್ಯಾಯ |ಧರ್ಮ

ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅ.20 ಕೊನೆಯ ದಿನ

ಬೆಂಗಳೂರು: ವಿದ್ಯಾಸಿರಿ ಯೋಜನೆಯಡಿ ಅಲ್ಪಸಂಖ್ಯಾತ ಸಮುದಾಯದಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ 2022-23 ನೇ ಸಾಲಿನ ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಇಲಾಖೆಯ ಸರ್ಕಾರಿ ಅನುದಾನಿತ ವಿದ್ಯಾರ್ಥಿನಿಲಯ, ಹಾಗೂ ವಸತಿ ಕಾಲೇಜುಗಳಲ್ಲಿ ಪ್ರವೇಶ ದೊರೆಯದ, ಪಿಯುಸಿ ಹಾಗೂ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತವಿದ್ಯಾರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ಅನುಕೂಲವಾಗುವಂತೆ, ಊಟ ಮತ್ತು ವಸತಿ ಸೌಲಭ್ಯಕ್ಕೆ ಸಹಾಯವನ್ನು ಒದಗಿಸಲು ಪ್ರತಿ ತಿಂಗಳು ರೂ.1,500 ರಂತೆ ಶೈಕ್ಷಣಿಕ ಅವಧಿಯ 10 ತಿಂಗಳಿಗೆ( ಅನುದಾನ ಅಭ್ಯತೆಯನುಸಾರ) ಒಟ್ಟು ರೂ. 15,000 ಗಳನ್ನು ಸಂಬಂಧಪಟ್ಟ ವಿದ್ಯಾರ್ಥಿಗಳು ಬ್ಯಾಂಕ್‌ ಖಾತೆಗೆ ಆನ್‌ಲೈನ್ ಮುಖಾಂತರ ಜಮಾ ಮಾಡಲಾಗುವುದು.

ಆಸಕ್ತ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಎಲ್ಲಾ ದಾಖಲೆಗಳ ಸಹಿತ ಸೇವಾಸಿಂಧು, ಅಧಿಕೃತ ವೆಬ್ಸೈಟ್‌ https://dom.karnataka.gov.in ಅನ್ನು ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 20 ಆಗಿರುತ್ತದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page