ಹಾಸನ : ಹಾಸನ ಜಿಲ್ಲೆಯಲ್ಲಿ ಐದು ಲಕ್ಷ 64 ಸಾವಿರ ಬಿಪಿಎಲ್ ಕಾರ್ಡ್‌ಗಳು ಇದ್ದು, ಅದರಲ್ಲಿ ಶೇಕಡಾ 82ರಷ್ಟು ಕಾರ್ಡ್‌ಗಳಿಗೆ ನಿಯಮಿತವಾಗಿ ದವಸ-ಧಾನ್ಯ ವಿತರಣೆ ಮಾಡಲಾಗುತ್ತಿದೆ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.
ನಗರದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪ್ರತಿ ಸದಸ್ಯರಿಗೆ ಐದು ಕೆಜಿ ಅಕ್ಕಿ ನೀಡುತ್ತಿದ್ದರೆ, ರಾಜ್ಯ ಸರ್ಕಾರವೂ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿ ನೀಡುತ್ತಿದೆ. ಈ ಮೂಲಕ ಪ್ರತಿ ಫಲಾನುಭವಿಗೆ ಒಟ್ಟು ಹತ್ತು ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಹೊಸದಾಗಿ 210 ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಸರ್ಕಾರ ತೀರ್ಮಾನಿಸಿದ್ದು, ಜನರಿಗೆ ಸಮೀಪದಲ್ಲೇ ಆಹಾರ ಧಾನ್ಯ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಅನ್ನ ಸುವಿಧಾ ಯೋಜನೆ ಜಾರಿ:
ರಾಜ್ಯ ಸರ್ಕಾರ ಜಾರಿಗೊಳಿಸಿರುವ ‘ಅನ್ನ ಸುವಿಧಾ ಯೋಜನೆ’ ಅಡಿಯಲ್ಲಿ ಹಾಸನ ಜಿಲ್ಲೆಯಲ್ಲಿ 15 ಸಾವಿರ ಕಾರ್ಡ್‌ಗಳು ಒಳಗೊಂಡಿದ್ದು, ಪ್ರಥಮ ಹಂತದಲ್ಲಿ ಎರಡು ಸಾವಿರ ಕಾರ್ಡ್‌ಗಳಿಗೆ ಯೋಜನೆ ಪ್ರಯೋಜನ ನೀಡಲಾಗುತ್ತದೆ ಎಂದು ತಿಳಿಸಿದರು. 75 ವರ್ಷ ಮೀರಿದ ಹಿರಿಯ ನಾಗರಿಕರಿಗೆ ಮನೆ ಬಾಗಿಲಿಗೆ ಆಹಾರ ಪದಾರ್ಥಗಳನ್ನು ತಲುಪಿಸುವ ವ್ಯವಸ್ಥೆಯೂ ಜಾರಿಯಲ್ಲಿದೆ ಎಂದರು.
ಕೇಂದ್ರ ಸರ್ಕಾರದ ಪ್ರಕಾರ ಏಳು ಲಕ್ಷ ಎಪಿಎಲ್ ಕಾರ್ಡ್‌ಗಳಿಗೆ ಅರ್ಹರಾಗಬೇಕಾದವರು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ ಎಂಬ ವಿಚಾರ ಪ್ರಸ್ತಾಪವಾಗಿದ್ದು, ಹಾಸನ ಜಿಲ್ಲೆಯಲ್ಲಿ 22,392 ಕಾರ್ಡ್‌ಗಳ ಪರಿಶೀಲನೆ ಮತ್ತು ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದರು.
ರಾಗಿ ಖರೀದಿ ಕೇಂದ್ರ ಆರಂಭ :
ಹಾಸನ ಜಿಲ್ಲೆಯಲ್ಲಿ ರಾಗಿ ಖರೀದಿ ಕೇಂದ್ರ ಈಗಾಗಲೇ ಆರಂಭಗೊಂಡಿದ್ದು, ಈ ವರ್ಷ 10 ಸಾವಿರ ಮೆಟ್ರಿಕ್ ಟನ್ ರಾಗಿ ಖರೀದಿ ಮಾಡುವ ಗುರಿ ಇಡಲಾಗಿದೆ. ಈಗಾಗಲೇ 44,258 ರೈತರು ನೋಂದಣಿ ಮಾಡಿಕೊಂಡಿದ್ದು, ಸುಮಾರು 80 ಶೇಕಡಾ ರೈತರು ರಾಗಿ ಮಾರಾಟಕ್ಕೆ ಆಗಮಿಸುವ ನಿರೀಕ್ಷೆ ಇದೆ. ಉತ್ತಮ ಗುಣಮಟ್ಟದ ರಾಗಿ ನೀಡುವಂತೆ ರೈತರಿಗೆ ಸಚಿವರು ಮನವಿ ಮಾಡಿದರು.
ಇಂದಿರಾ ಫುಡ್ ಕಿಟ್ ವಿತರಣೆ :
‘ಇಂದಿರಾ ಕಿಟ್’ ನೀಡುವುದರಿಂದ ಪೌಷ್ಟಿಕ ಆಹಾರ ಒದಗಿಸಿದಂತಾಗುತ್ತದೆ ಎಂದು ಹೇಳಿದ ಸಚಿವರು, ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ವಿತರಣೆ ಪ್ರಾರಂಭವಾಗಲಿದೆ
