Home ಬ್ರೇಕಿಂಗ್ ಸುದ್ದಿ ಹಾಸನದಲ್ಲಿ 27 ವರ್ಷದ ಯುವಕ ಹೃದಯಾಘಾತಕ್ಕೆ ಬಲಿ

ಹಾಸನದಲ್ಲಿ 27 ವರ್ಷದ ಯುವಕ ಹೃದಯಾಘಾತಕ್ಕೆ ಬಲಿ

ಹಾಸನ: ಹೃದಯಾಘಾತದಿಂದ 27 ವರ್ಷದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಹಾಸನ ನಗರದ ವಿಜಯನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತ ಯುವಕನನ್ನು ಮೂಲತಃ ಕುದುರುಗುಂಡಿ ಗ್ರಾಮದ ನಂದನ್ (27) ಎಂದು ಗುರುತಿಸಲಾಗಿದೆ. ನಂದನ್ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಒಂದೂವರೆ ವರ್ಷದ ಹಿಂದಷ್ಟೇ ವಿವಾಹವಾಗಿದ್ದರು. ಪತ್ನಿ ಹಾಗೂ ಮಗಳೊಂದಿಗೆ ವಿಜಯನಗರದಲ್ಲಿ ವಾಸವಾಗಿದ್ದರು.

ಇಂದು ಬೆಳಿಗ್ಗೆ ಮನೆಯಲ್ಲಿ ಇದ್ದ ವೇಳೆ ನಂದನ್‌ಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಕುಟುಂಬಸ್ಥರು ಅವರನ್ನು ಆಟೋದಲ್ಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವಷ್ಟರಲ್ಲಿ ನಂದನ್ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಯುವಕನ ಅಕಾಲಿಕ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ವಿಜಯನಗರದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

You cannot copy content of this page

Exit mobile version