Wednesday, June 19, 2024

ಸತ್ಯ | ನ್ಯಾಯ |ಧರ್ಮ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪೂರಕ ಪರೀಕ್ಷೆಯಲ್ಲಿ 65,233 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟು ಶೇಕಡಾವಾರು ಫಲಿತಾಂಶ 37.08% ಆಗಿದೆ.

ಆಗಸ್ಟ್‌ 12 ರಿಂದ ಆಗಸ್ಟ್‌ 25ರವರೆಗೆ ಪೂರಕ ಪರೀಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,75,905 ವಿದ್ಯಾರ್ಥಿಗಳ ಪೈಕಿ, 65,233 ವಿದ್ಯಾರ್ಥಿಗಳು ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. 9,510 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು karresults.nic.in ನಲ್ಲಿ Karresults ನ ಅಧಿಕೃತ ವೆಬ್‌ಸೈಟ್ ಮೂಲಕ ಪರಿಶೀಲಿಸಬಹುದು.

Related Articles

ಇತ್ತೀಚಿನ ಸುದ್ದಿಗಳು