ಪುಣೆ (ಮಹಾರಾಷ್ಟ್ರ): ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಭಾನುವಾರ ತಡರಾತ್ರಿ ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಡಂಪರ್ ಟ್ರಕ್ ಹರಿದಿದೆ.
ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರ ವಿವರಗಳ ಪ್ರಕಾರ, ಭಾನುವಾರ ರಾತ್ರಿ 1 ಗಂಟೆಗೆ ಅಪಘಾತ ಸಂಭವಿಸಿದೆ. ಪುಣೆಯ ವಾಘೋಲಿ ಚೌಕ್ ಪ್ರದೇಶದಲ್ಲಿ ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಡಂಪರ್ ಟ್ರಕ್ ಹರಿದಿದೆ.
ಈ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಇಬ್ಬರು ಮಕ್ಕಳೂ ಸೇರಿದ್ದಾರೆ. ಇನ್ನು ಆರು ಮಂದಿ ಗಾಯಗೊಂಡಿದ್ದಾರೆ ಎಂದು ವಲಯ 4ರ ಉಪ ಆಯುಕ್ತ ಹಿಮ್ಮತ್ ಜಾಧವ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಚಾಲಕ ಕುಡಿದ ಅಮಲಿನಲ್ಲಿ ಟ್ರಕ್ ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ. ಚಾಲಕನ ವಿರುದ್ಧ ಮೋಟಾರು ವಾಹನ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಈ ಪ್ರಕರಣದ ಕುರಿತು ತನಿಖೆ ಆರಂಭಿಸಲಾಗಿದೆ ಎಂದು ತಿಳಿಸಿದರು.