Home ಬೆಂಗಳೂರು ಕಲ್ಯಾಣ ಕರ್ನಾಟಕಕ್ಕೆ 3,000 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ ರಾಜ್ಯಸರ್ಕಾರ

ಕಲ್ಯಾಣ ಕರ್ನಾಟಕಕ್ಕೆ 3,000 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ ರಾಜ್ಯಸರ್ಕಾರ

0

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರವು 3,000 ಕೋಟಿ ರೂ. ಗಳ ಕಾಮಗಾರಿಗಳಿಗೆ ಚಾಲನೆ ನೀಡಿದೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ರಾಜ್ಯ ಬಿಜೆಪಿ ಘಟಕವು, ಕಲ್ಯಾಣ ಕರ್ನಾಟಕದ ಸಮಗ್ರ ಕಲ್ಯಾಣಕ್ಕಾಗಿ 3,000 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಜೊತೆಗೆ ಮುಂದಿನ ಬಜೆಟ್‌ನಲ್ಲಿ ಮತ್ತೆ 5000 ಸಾವಿರ ಕೋಟಿ ರೂ. ಅನುದಾನ ಬಿಡುಗಡೆ ಮಾಡುವುದಾಗಿ ರಾಜ್ಯ ಸರ್ಕಾರವು ಘೋಷಿಸಿದೆ. ಈ ಹಿನ್ನಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜನರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದೆ.

You cannot copy content of this page

Exit mobile version