ಹರಿಯಾಣ: ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಭಯೋತ್ಪಾದಕ ಚಟುವಟಿಕೆಗಳು, ಸಾವು ನೋವುಗಳು ಸಾಕಷ್ಟು ಕಡಿಮೆಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿದ್ದಾರೆ
ಫೆಬ್ರವರಿ 6, 2020ರಲ್ಲಿ ಜಮ್ಮು ಮತ್ತು ಕಾಶ್ಮೀರ ಜನತೆಯ ಮೇಲಿನ ನಂಬಿಕೆಯಿಟ್ಟು ಸರ್ಕಾರ 370 ನೇ ರದ್ದುಗೊಳಿಸಿತ್ತು.
ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ, ಭಯೋತ್ಪಾದಕ ಚಟುವಟಿಕೆಗಳಲ್ಲಿ 34% ಇಳಿಕೆಯಾಗಿದೆ. ಭದ್ರತಾ ಪಡೆಗಳ ಸಾವು 64%ರಷ್ಟು ಕಡಿಮೆಯಾಗಿದೆ. ಮತ್ತು ನಾಗರಿಕರ ಸಾವಿನಲ್ಲಿ 90% ಇಳಿಕೆಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹರಿಯಾಣದಲ್ಲಿ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ
ಏನಿದು 370 ವಿಧಿ? : 1947ರಲ್ಲಿ ಭಾರತ ಮತ್ತು ಪಾಕ್ ಸ್ವತಂತ್ರ ರಾಷ್ಟ್ರಗಳಾಗಿ ರೂಪಪಡೆದಿದ್ದರೂ ಕಾಶ್ಮೀರದ ರಾಜ ಹರಿಸಿಂಗ್ ಮಾತ್ರ ಯಾವ ರಾಷ್ಟ್ರದ ಜೊತೆಗೆ ಒಂದಾಗದೆ ಸ್ವತಂತ್ರ್ಯವಾಗಿ ಉಳಿಯುವ ಬಯಕೆಯನ್ನು ಹೊಂದಿದ್ದರು. ಆದರೆ, ಕಣಿವೆ ರಾಜ್ಯದ ಮೇಲೆ 1947ರಲ್ಲಿ ಪಾಕಿಸ್ತಾನ ಅಪ್ರಚೋದಿತ ದಾಳಿ ನಡೆಸಿದ್ದ ಸಂದರ್ಭದಲ್ಲಿ ರಾಜ ಹರಿಸಿಂಗ್ ಭಾರತದ ಸಹಕಾರ ಕೇಳುತ್ತಾರೆ. ಅಲ್ಲದೆ ಭಾರತದ ಜೊತೆ ವಿಲೀನಗೊಳ್ಳಲು ಒಪ್ಪಿ ಕೆಲವು ಷರತ್ತುಗಳನ್ನು ಮುಂದಿಡುತ್ತಾನೆ. ಹೀಗೆ ಹುಟ್ಟುಪಡೆದದ್ದೇ 370 ವಿಧಿ.