Home ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಈವರೆಗೆ 4.9 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ ರದ್ದು

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಈವರೆಗೆ 4.9 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ ರದ್ದು

0

ರಾಜ್ಯ ಸರ್ಕಾರವು ಅನರ್ಹ ಬಿಪಿಎಲ್ ಕಾರ್ಡ್‌‌ಗಳನ್ನು ಪರಿಶೀಲಿಸಿ, ರಾಜ್ಯಾದ್ಯಂತ ಒಟ್ಟು 4.9 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಈ ಮಾಹಿತಿ ದೃಢಪಡಿಸಿದ್ದಾರೆ.

ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವ ಪಡಿತರರ ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ಹೇಳಿದ್ದು, ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಇಲಾಖೆ ಕೈಗೊಂಡ ಅನರ್ಹ ಪಡಿತರದಾರರ ಪತ್ತೆ ಕಾರ್ಯದಲ್ಲಿ ಕಳೆದ ಕೆಲವು ವಾರಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಅನರ್ಹ ಫಲಾನುಭವಿಗಳನ್ನು ಗುರುತಿಸಿ ಅವರ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ.

ಈವರೆಗೆ ಅನರ್ಹಗೊಂಡ ಕಾರ್ಡುಗಳಲ್ಲಿ ಒಟ್ಟಾರೆ 4.9 ಲಕ್ಷ ಕಾರ್ಡುಗಳು ಹೊಂದಿದೆ ಎಂದು ತಿಳಿದು ಬಂದಿದೆ. ಬಿಪಿಎಲ್ ಕಾರ್ಡ್ ಕಳೆದುಕೊಂಡ ಅನರ್ಹರಿಗೆ ಸರ್ಕಾರ ಎಪಿಎಲ್ ಕಾರ್ಡ್‌ಗಳನ್ನು ನೀಡಲು ಮುಂದಾಗಿದೆ.

ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದು ಪಡಿತರ ಯೋಜನೆಯ ಲಾಭ ಪಡೆದುಕೊಳ್ಳುತ್ತಿರುವ ಫಲಾನುಭವಿಗಳಿಗೆ ದಂಡ ವಿಧಿಸುವುದಕ್ಕೂ ಆಹಾರ ಇಲಾಖೆ ಚಿಂತನೆ ನಡೆಸುತ್ತಿದೆ. ಈ ಸಂಬಂಧ ದಂಡದ ನಿಯಮಗಳ ರೂಪುರೇಷೆಗಳನ್ನು ಕೂಡ ಸಿದ್ಧಪಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

You cannot copy content of this page

Exit mobile version