Thursday, June 13, 2024

ಸತ್ಯ | ನ್ಯಾಯ |ಧರ್ಮ

40% ಆಡಳಿತದಲ್ಲಿ ದುಡ್ಡಿದ್ರೆ ಸರ್ಕಾರಿ ಹುದ್ದೆ ಇಲ್ಲದಿದ್ದರೆ ನಿರುದ್ಯೋಗ: ರಾಹುಲ್‌ ಗಾಂಧಿ

ಬಳ್ಳಾರಿ: 40% ಆಡಳಿತದಿಂದ ರಾಜ್ಯದಲ್ಲಿ ಹಣ ನೀಡಿದರೆ ಸರ್ಕಾರಿ ಹುದ್ದೆ, ಹಣವಿಲ್ಲದಿದ್ದರೆ ಜೀವನಪೂರ್ತಿ ನಿರುದ್ಯೋಗಿಗಳಾಗಿರಬೇಕು ಎಂದು ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷದ ನಾಯಕ ರಾಹುಲ್‌ ಗಾಂಧಿ ಟೀಕಿಸಿದರು.

ದೇಶದ 45 ವರ್ಷಗಳ ಇತಿಹಾಸದಲ್ಲೇ ಗರಿಷ್ಠ ನಿರುದ್ಯೋಗವಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಹೇಳಿದ್ದರು. ಆದರೆ ಇದ್ದ ಉದ್ಯೋಗಗಳೂ ನಾಶವಾಗಿವೆ! ಹಾಗೂ ನೋಟು ರದ್ದತಿ, ಜಿಎಸ್ ಟಿ, ಕೋವಿಡ್ ಸಮಯದಲ್ಲಿನ ನೀತಿಯಿಂದ 12.5 ಕೋಟಿ ಜನ ನಿರುದ್ಯೋಗಿಗಳಾಗಿದ್ದಾರೆ ಎಂದು ಹಾಹುಲ್‌ ಗಾಂಧಿಯವರು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಪೊಲೀಸ್ ಇಲಾಖೆ ಸೇರಬೇಕಾದರೆ ₹80 ಲಕ್ಷ ಲಂಚ ನೀಡಬೇಕು.  ಬಿಜೆಪಿ ಸರ್ಕಾರದ ಆಡಳಿತದಲ್ಲಿ ಹಣವಿದ್ದರೆ ಸರ್ಕಾರಿ ಹುದ್ದೆ ಖರೀದಿಸಬಹುದು. ಹಣವಿಲ್ಲದಿದ್ದರೆ ಜೀವನಪೂರ್ತಿ ನಿರುದ್ಯೋಗಿಗಳಾಗಿರಬೇಕು. ಇದಕ್ಕಾಗಿ ರಾಜ್ಯ ಸರ್ಕಾರಕ್ಕೆ 40% ಕಮಿಷನ್ ಸರ್ಕಾರ ಎಂದೇ ಬಿರುದು ನೀಡಲಾಗಿದೆ! ಎಂದು ವ್ಯಂಗ್ಯವಾಡಿದರು.

Related Articles

ಇತ್ತೀಚಿನ ಸುದ್ದಿಗಳು