ಗಂಗೊಳ್ಳಿ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಮೀನುಗಾರಿಕಾ ಜೆಟ್ಟಿ ಕಳಪೆ ಕಾಮಗಾರಿಯಿಂದಾಗಿ ಕುಸಿತಗೊಂಡು ನೀರಿನ ಪಾಲಾಗಿರುವ ಕುರಿತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಗಂಗೊಳ್ಳಿ ಕುಂದಾಪುರ ನಡುವಿನ ಸೇತುವೆಯು ಅಲ್ಲಿನ ಜನರ ಬಹುದಿನಗಳ ಬೇಡಿಕೆಯಾಗಿದ್ದರಿಂದ ರಾಜ್ಯ ಸರ್ಕಾರವು ಮೀನುಗಾರಿಕಾ ಜೆಟ್ಟಿ ನಿರ್ಮಾಣಕ್ಕಾಗಿ ಕೋಟಿಗಟ್ಟಲೆ ಹಣವನ್ನು ಅನುದಾನ ಮಾಡಿತ್ತು. ಆದರೆ ಕಳಪೆ ಕಾಮಗಾರಿಯಿಂದ 12 ಕೋಟಿ ರೂಪಾಯಿ ವೆಚ್ಚದ ನಿರ್ಮಾಣ ಹಂತದಲ್ಲಿದ್ದ ಸೇತುವೆಯು ಇಂದು ನೀರು ಪಾಲಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ರಾಜ್ಯದ 40% ಕಮಿಷನ್ ಸರ್ಕಾರ ಇಂದು ಕುಂದಾಪುರ ತಾಲೂಕಿನ ಗಂಗೊಳ್ಳಿ ಬಂದರಿನಲ್ಲಿ ಮುಳುಗಿದೆ. 12 ಕೋಟಿ ರುಪಾಯಿ ವೆಚ್ಚದ ಜಟ್ಟಿ ನಿರ್ಮಾಣ ಹಂತದಲ್ಲೇ ನದಿ ನೀರಿನ ಪಾಲಾಗಿದೆ. ಈ ಹಿನ್ನಲೆ, ಕಾಮಗಾರಿಯಲ್ಲಿ ಗುತ್ತಿಗೆದಾರ ಬಿಜೆಪಿಗೆ ನೀಡಿದ್ದ ಕಮಿಷನ್ ಎಷ್ಟು? ಎನ್ನುವ ಬಗ್ಗೆ ತನಿಖೆಯಾಗಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.