ಬೆಂಗಳೂರು : ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ (Cm Siddaramaiah) 2026-27ನೇ ಸಾಲಿನ ಕರ್ನಾಟಕ ಬಜೆಟ್ (Karnataka Budget 2026) ಅನ್ನು ಮಂಡಿಸುತ್ತಿದ್ದಾರೆ. ಈ ಬಜೆಟ್‌ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ವಿಶೇಷ ಒತ್ತು ನೀಡಲಾಗಿದ್ದು, 2025-26ನೇ ಸಾಲಿನಲ್ಲಿ 100 ಉರ್ದು ಶಾಲೆಗಳನ್ನು 400 ಕೋಟಿ ರೂ. ವೆಚ್ಚದಲ್ಲಿ ಕೆ.ಪಿ.ಎಸ್ ಮಾದರಿಯಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸಲು ಸರ್ಕಾರ ನಿರ್ಧರಿಸಿದೆ.
ಮಾನವತೆಯ ಕಟ್ಟಡಕ್ಕೆ ಪ್ರೀತಿಯೊಂದೇ ಇಟ್ಟಿಗೆ” ಎಂಬ ಬಿ.ಆರ್. ಲಕ್ಷ್ಮಣರಾವ್ ಅವರ ಸಾಲುಗಳನ್ನು ಉಲ್ಲೇಖಿಸಿ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿಯ ಬಜೆಟ್‌ನಲ್ಲಿ ಕೊಡುಗೆಗಳನ್ನು ನೀಡಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿ ಹೊಸ ಯೋಜನೆಗಳು
ಶಿಶುನಾಳ ಶರೀಫ ವಸತಿ ಶಾಲೆ: ಸಂತ ಶಿಶುನಾಳ ಶರೀಫರ ಹೆಸರಿನಲ್ಲಿ 10 ಹೊಸ CBSE ಪಠ್ಯಕ್ರಮದ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು. 2026-27ನೇ ಸಾಲಿನಲ್ಲಿ ಒಟ್ಟು 25 ಅಂತಹ ಶಾಲೆಗಳನ್ನು ತೆರೆಯುವ ಗುರಿ ಇದೆ ಎಂದಿದ್ದಾರೆ.
ಲ್ಯಾಪ್ಟಾಪ್ ವಿತರಣೆ
ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಡಿಜಿಟಲ್ ಶಿಕ್ಷಣಕ್ಕೆ ಉತ್ತೇಜನ ನೀಡಲು 5,000 ವಿದ್ಯಾರ್ಥಿಗಳಿಗೆ ತಲಾ 50,000 ರೂ. ಮೌಲ್ಯದ ಲ್ಯಾಪ್ಟಾಪ್ ನೀಡಲಾಗುವುದು ಎಂದು ಘೋಷಿಸಿದ್ದಾರೆ. NEET/JEE/K-CET ಪರೀಕ್ಷೆಗಳಿಗೆ ತರಬೇತಿ ನೀಡಲು ನಾಲ್ಕು ವಸತಿ ಶಾಲೆಗಳನ್ನು ‘Center of Excellence’ ಗಳನ್ನಾಗಿ ಪರಿವರ್ತಿಸಲಾಗುವುದು, 25 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಿ, ಹಳೆಯ ನಿಲಯಗಳ ಸಂಖ್ಯಾಬಲ ಹೆಚ್ಚಿಸಲಾಗುವುದು ಎಂದಿದ್ದಾರೆ
