Home ರಾಜ್ಯ ಉಪನೋಂದಣಿ ಕಚೇರಿಗಳಲ್ಲಿ 455 ಹುದ್ದೆಗಳ ಭರ್ತಿಗೆ ಕ್ರಮ : ಕೃಷ್ಣ ಬೈರೇಗೌಡ

ಉಪನೋಂದಣಿ ಕಚೇರಿಗಳಲ್ಲಿ 455 ಹುದ್ದೆಗಳ ಭರ್ತಿಗೆ ಕ್ರಮ : ಕೃಷ್ಣ ಬೈರೇಗೌಡ

0

ಬೆಂಗಳೂರು: ಉಪನೋಂದಣಿ ಕಚೇರಿಗಳಲ್ಲಿ ಒಟ್ಟು 455 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡರು ತಿಳಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳು ಸಾಂಗವಾಗಿ ನಡೆಯಲು ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಪ್ರಾಮುಖ್ಯತೆ ನೀಡಲಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿರುವ 256 ಉಪನೋಂದಣಿ ಕಚೇರಿಗಳಲ್ಲಿ ಒಟ್ಟು 1145 ಹುದ್ದೆಗಳು ಮಂಜೂರಾಗಿವೆ. ಈ ಪೈಕಿ 455 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಹಾಗೂ ಆರ್ಥಿಕ ಇಲಾಖೆ ಜತೆ ಚರ್ಚಿಸಿ ಹೆಚ್ಚುವರಿ ಹುದ್ದೆಗಳ ಭರ್ತಿಗೆ ಅನುಮತಿ ಪಡೆಯಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

You cannot copy content of this page

Exit mobile version