ಗುಜರಾತ್‌ನ ಜುನಾಗಢ್ ಎನ್ನುವಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಕಾರಣ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಏಳು ಮಂದಿ ಸಾವಿಗೀಡಾಗಿದ್ದು.
ವೇಗವಾಗಿ ಬಂದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಎದುರಿನ ಲೇನ್‌ಗೆ ಪಲ್ಟಿ ಹೊಡೆದು ವೇಗವಾಗಿ ಬಂದ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎಲ್ಲಾ ಏಳು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ
ಐವರು ವಿದ್ಯಾರ್ಥಿಗಳು ಒಂದು ಕಾರಿನಲ್ಲಿ ಪರೀಕ್ಷೆಗಾಗಿ ಕಾಲೇಜಿಗೆ ಪ್ರಯಾಣಿಸುತ್ತಿದ್ದರೆ, ಇನ್ನಿಬ್ಬರು ಎರಡನೇ ವಾಹನದಲ್ಲಿದ್ದರು. ಡಿಕ್ಕಿಯ ರಭಸಕ್ಕೆ ಎರಡೂ ಕಾರುಗಳು ಗುರುತಿಸಲಾಗದಷ್ಟು ಜಖಂಗೊಂಡಿವೆ.
ಜುನಾಗಢ-ಸೋಮನಾಥ ಹೆದ್ದಾರಿಯ ಭಂಡೂರಿ ಗ್ರಾಮದ ಬಳಿ ಸೋಮವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಸ್ಥಳೀಯರು ಕೂಡಲೇ ಜಮಾಯಿಸಿ ಪೊಲೀಸ್ ಮತ್ತು ತುರ್ತು ಸೇವೆಗಳಿಗೆ ಮಾಹಿತಿ ನೀಡಿದರು.
ಆಂಬುಲೆನ್ಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಪೊಲೀಸ್ ತಂಡವು ತಕ್ಷಣವೇ ಸ್ಥಳಕ್ಕೆ ಆಗಮಿಸಿತು. ಡಿಕ್ಕಿಯ ರಭಸಕ್ಕೆ ಹೊತ್ತಿ ಉರಿದ ಬೆಂಕಿಯನ್ನು ಅಗ್ನಿಶಾಮಕ ದಳ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ.
ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅಪಘಾತದ ಕಾರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.