PFI ಮತ್ತು ಅದರ ಅಂಗಸಂಸ್ಥೆಗಳನ್ನು ಕಾನೂನು ಬಾಹಿರ ಎಂದು ಪರಿಗಣಿಸಿ ಕೇಂದ್ರ ಸರ್ಕಾರ 5 ವರ್ಷಗಳ ವರೆಗೆ ಭಾರತದಲ್ಲಿ ನಿಶೇಧಿಸಿ ಆದೇಶ ಹೊರಡಿಸಿದೆ.
PFI ಮತ್ತು ಅದರ ಸಹವರ್ತಿ ಸಂಸ್ಥೆಗಳಾದ ರೆಹಬ್ ಇಂಡಿಯಾ ಫೌಂಡೇಶನ್ (RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (AIIC), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಷನ್ (NCHRO), ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರಿಹ್ಯಾಬ್ ಫೌಂಡೇಶನ್ ಇವಿಷ್ಟೂ ಸಂಘಟನೆಗಳನ್ನು ಕೇಂದ್ರ ಸರ್ಕಾರ ಕಾನೂನು ಬಾಹಿರ ಎಂದು ಪರಿಗಣಿಸಿ 5 ವರ್ಷಗಳ ಕಾಲ ಭಾರತದಲ್ಲಿ ಅವುಗಳ ಚಟುವಟಿಕೆಗಳನ್ನು ನಿಶೇಧಿಸಿದೆ.
ಇತ್ತೀಚೆಗೆ ಒಂದೇ ಸಮಯಕ್ಕೆ ಭಾರತದ ಮೂಲೆ ಮೂಲೆಗಳಲ್ಲಿ ನೂರಕ್ಕೂ ಹೆಚ್ಚು ಕಡೆಗಳಲ್ಲಿ PFI ಮತ್ತು SDPI ಮುಖಂಡರ ಮನೆ ಮೇಲೆ NIA ದಾಳಿ ನಡೆಸಿ 100 ಕ್ಕೂ ಹೆಚ್ಚು ಜನರನ್ನು ಬಂಧಿಸಿತ್ತು. ಆ ಮುಖಂಡರ ವಿಚಾರಣೆ ಹಂತದಲ್ಲೇ ಕೇಂದ್ರ ಸರ್ಕಾರ ತರಾತುರಿಯಲ್ಲಿ ಈ ಮೇಲೆ ಉಲ್ಲೇಖಿಸಿದ ಸಂಘಟನೆಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ.
ಈ ಹಿನ್ನೆಲೆಯಲ್ಲಿ PFI ಮತ್ತು ಅದರ ಸಹವರ್ತಿ ಸಂಘಟನೆಯವರು ಕಾನೂನಾತ್ಮಕ ನಿಲುವು ತಗೆದುಕೊಳ್ಳಲಿದ್ದಾರಾ ಅಥವಾ ಮುಂದಿನ ನಡೆ ಏನು ಎಂಬುದನ್ನು ಕಾದು ನೋಡಬೇಕಿದೆ.