Home ದೇಶ ಭಾರೀ ಮಳೆ | ಉತ್ತರಾಖಂಡದ ಪುಣ್ಯಕ್ಷೇತ್ರದಲ್ಲಿ ಸಿಲುಕಿಕೊಂಡ 50 ಯಾತ್ರಿಗಳು

ಭಾರೀ ಮಳೆ | ಉತ್ತರಾಖಂಡದ ಪುಣ್ಯಕ್ಷೇತ್ರದಲ್ಲಿ ಸಿಲುಕಿಕೊಂಡ 50 ಯಾತ್ರಿಗಳು

0

ಉತ್ತರಾಖಂಡದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಕಳೆದೆರಡು ದಿನಗಳಿಂದ ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಈ ಮಳೆಯಿಂದಾಗಿ ಹಲವೆಡೆ ಭೂಕುಸಿತ ಉಂಟಾಗುತ್ತಿದೆ.

ಮತ್ತೊಂದೆಡೆ ಪ್ರಸಿದ್ಧ ಪುಣ್ಯಕ್ಷೇತ್ರಗಳ ದರ್ಶನಕ್ಕೆಂದು ಮಲೆನಾಡಿನತ್ತ ತೆರಳಿದ್ದ ಯಾತ್ರಾರ್ಥಿಗಳು ಈ ಮಳೆಗೆ ಸಿಲುಕಿ ನಲುಗುತ್ತಿದ್ದಾರೆ.

ರುದ್ರಪ್ರಯಾಗ ಜಿಲ್ಲೆಯ ಮಹೇಶ್ವರ ದೇವಸ್ಥಾನದ ಬಳಿ ಸುಮಾರು 50 ಯಾತ್ರಿಕರು ಸಿಲುಕಿಕೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮಾರ್ಕಂಡ ನದಿಗೆ ನಿರ್ಮಿಸಿದ್ದ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿದೆ ಎನ್ನಲಾಗಿದೆ. ಇದರಿಂದ ದೇವಸ್ಥಾನಕ್ಕೆ ತೆರಳಿದ್ದ ಭಕ್ತರು ಅಲ್ಲಿಯೇ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ. ಮಾಹಿತಿ ಪಡೆದ ನಂತರ ರಕ್ಷಣಾ ತಂಡವು ಯಾತ್ರಾರ್ಥಿಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದರು.

ಮತ್ತೊಂದೆಡೆ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಳೆಯಿಂದಾಗಿ ಭೂಕುಸಿತ ಸಂಭವಿಸುವ ಸಂಭವವಿದ್ದು, ಗುಡ್ಡಗಾಡು ಪ್ರದೇಶಗಳಿಂದ ದೂರ ಉಳಿಯುವಂತೆ ಸೂಚಿಸಲಾಗಿದೆ.

You cannot copy content of this page

Exit mobile version