Friday, June 14, 2024

ಸತ್ಯ | ನ್ಯಾಯ |ಧರ್ಮ

ದೇಶದಲ್ಲಿ ಹೊಸದಾಗಿ 5,221 ಕೋವಿಡ್‌ ಪ್ರಕರಣಗಳು ವರದಿ: 15 ಮಂದಿ ಮೃತ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5,221 ಹೊಸ ಕೋವಿಡ್‌ ಪ್ರಕರಣಗಳು ದೃಢವಾಗಿದ್ದು,  15 ಮಂದಿ ಮೃತವಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ವರದಿ ಮಾಡಿದೆ.

ದೇಶದಲ್ಲಿ ಇದುವರೆಗೆ 4, 45,00,580 ಮಂದಿಗೆ  ಕೊರೋನಾ ಸೋಂಕು ದೃಢಪಟ್ಟಿದ್ದು, ಒಟ್ಟು 5,28, 165 ಮಂದಿ ಮೃತಪಟ್ಟಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯದ ಕೋವಿಡ್‌ ವರದಿ

ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ, ದೈನಂದಿನ ಕೋವಿಡ್‌ ದೃಢ ಪ್ರಕರಣಗಳ ಪ್ರಮಾಣ ಶೇ 2,82 ಮತ್ತು ವಾರದ ದೃಢ ಪ್ರಕರಣಗಳ ಪ್ರಮಾಣ  ಶೇ 1.72ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 47,176 ಕ್ಕೆ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 5,975 ಮಂದಿ  ಚೇತರಿಸಿಕೊಂಡಿದ್ದಾರೆ. ಈ ಹಿನ್ನಲೆ 4,39,25,239 ಮಂದಿ ಗುಣಮುಖರಾಗಿದ್ದಾರೆ ಎಂದು ವರದಿ ಹೇಳಿದೆ.

Related Articles

ಇತ್ತೀಚಿನ ಸುದ್ದಿಗಳು