ಬೆಂಗಳೂರು : ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ (Karnataka Legislature Session) 11ನೇ ದಿನದ ಕಲಾಪ ನಡೆಯುತ್ತಿದ್ದು, ವಿಧಾನ ಪರಿಷತ್ನಲ್ಲಿ ಕರ್ನಾಟಕದಲ್ಲಿನ ವಿಶ್ವವಿದ್ಯಾಲಯಗಳ ಬೋಧಕ ಸಿಬ್ಬಂದಿ ನೇಮಕ ಕುರಿತು ಎಸ್ವಿ ಸಂಕನೂಎಂಎಲ್ಸಿ ರ (SV Sankanur) ಪ್ರಶ್ನೆ ಕೇಳಿದರು.ಬೋಧಕ, ಬೋಧಕೇತರ ಸಿಬ್ಬಂದಿ ಯಾವಾಗ ನೇಮಕ ಮಾಡಿಕೊಳ್ಳುತ್ತೀರಿ? ರಾಜ್ಯದ ವಿವಿಗಳಲ್ಲಿ ಶೇ 60 ರಷ್ಟು ಬೋಧಕ ಸಿಬ್ಬಂದಿ ಹುದ್ದೆಗಳು ಖಾಲಿ ಇವೆ. ಬೋಧಕೇತರ ಸಿಬ್ಬಂದಿ ಶೇ 80 ರಷ್ಟು ಹುದ್ದೆಗಳು ಖಾಲಿ ಇವೆ. ಬೋಧಕ ಸಿಬ್ಬಂದಿ ಇಲ್ಲದಿದ್ದರೆ ಉತ್ತಮ ಶಿಕ್ಷಣ ಸಿಗುವುದಿಲ್ಲ. ಅತಿಥಿ ಉಪನ್ಯಾಸಕರಿಂದ ಹೆಚ್ಚು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಯಾವ ಕಾಲಮಿತಿಯಲ್ಲಿ ಬೋಧಕ ಸಿಬ್ಬಂದಿ ಭರ್ತಿ ಮಾಡುತ್ತೀರಿ ಎಂದು ಬಿಜೆಪಿ ಸದಸ್ಯ ಎಸ್.ವಿ.ಸಂಕನೂರು ಪ್ರಶ್ನಿಸಿದರು.
ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಉತ್ತರ ನೀಡಿದರು. “ಬೋಧಕ, ಬೋಧಕೇತರ ಸಿಬ್ಬಂದಿ ಹಿಂದಿನಿಂದಲೂ ಖಾಲಿ ಇದೆ. 2,800 ಬೋಧಕ ಸಿಬ್ಬಂದಿ ಹುದ್ದೆಗಳು ಖಾಲಿ ಇವೆ. ನಮ್ಮ ಸರ್ಕಾರ ಬಂದಾಗಿನಿಂದ ಅನೇಕ ಹುದ್ದೆಗಳನ್ನು ತುಂಬಿದ್ದೇವೆ. ಜಾನಪದ ವಿಶ್ವವಿದ್ಯಾಲಯದಲ್ಲಿ ಹಗರಣ ಆಗಿದೆ ಅನ್ನೋ ಆರೋಪ ಕೇಳಿಬಂದಿತ್ತು. ಹೀಗಾಗಿ ಕೆಇಎ ಮೂಲಕ ಪರೀಕ್ಷೆ ನಡೆದಿದೆ. ಸಚಿವ ಸಂಪುಟದ ಉಪ ಸಮಿತಿಯನ್ನೂ ಕೂಡ ಮಾಡಲಾಗಿದೆ. ಕೆಲವೆಡೆ ಅವೈಜ್ಞಾನಿಕವಾಗಿ ಹುದ್ದೆ ಸೃಷ್ಟಿ ಮಾಡಲಾಗಿದೆ. ಪರಿಶೀಲನೆಗಾಗಿ ಮುಖ್ಯಮಂತ್ರಿಗಳಿಗೆ ಕಳುಹಿಸಲಾಗಿದೆ” ಎಂದು ಹೇಳಿದರು.“ವಿಶ್ವವಿದ್ಯಾಲಯಗಳಲ್ಲಿ ಶೇ.70ರಷ್ಟು ಹುದ್ದೆಗಳು ಖಾಲಿ ಇವೆ. ಯಾವಾಗ, ಎಷ್ಟು ಹುದ್ದೆ ಭರ್ತಿ ಅಂತ ಸ್ಪಷ್ಟವಾಗಿ ಹೇಳಿ. ವಿಶ್ವವಿದ್ಯಾಲಯಗಳು ಮುಚ್ಚುವ ಹಂತಕ್ಕೆ ಬಂದಿವೆ” ಎಂದು ಎಂದು ಎಸ್.ವಿ.ಸಂಕನೂರು ಮರು ಪ್ರಶ್ನೆ ಕೇಳಿದರು.