Home ಬ್ರೇಕಿಂಗ್ ಸುದ್ದಿ 7 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ; ಪರಪ್ಪನ ಅಗ್ರಹಾರಕ್ಕೆ ಹೆಚ್.ಡಿ.ರೇವಣ್ಣ

7 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ; ಪರಪ್ಪನ ಅಗ್ರಹಾರಕ್ಕೆ ಹೆಚ್.ಡಿ.ರೇವಣ್ಣ

0

ಪ್ರಜ್ವಲ್ ರೇವಣ್ಣನ ಅತ್ಯಾಚಾರ ಪ್ರಕರಣದ ಸಂತ್ರಸ್ತ ಮಹಿಳೆಯ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ವಶದಲ್ಲಿದ್ದ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಕಸ್ಟಡಿ ಇಂದು ಅಂತ್ಯವಾಗಿದ್ದು ಇಂದು ಅವರನ್ನು ಪರಪ್ಪನ ಅಗ್ರಹಾರಕ್ಕೆ ವರ್ಗಾವಣೆ ಮಾಡಲು ಹೈಕೋರ್ಟ್ ಆದೇಶಿಸಿದೆ.

ಜಾಮೀನು ಕೋರಿ 17ನೇ ಎಸಿಎಂಎಂ ನ್ಯಾಯಾಲಯದಲ್ಲಿ ರೇವಣ್ಣ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ನ್ಯಾಯಾಧೀಶ ರವೀಂದ್ರ ಬಿ ಕಟ್ಟಿಮನಿ ಇದೀಗ ರೇವಣ್ಣ ಅವರಿಗೆ ಮೇ 14ರ ವರೆಗೆ ಅಂದರೆ 7 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಶಾಸಕರಾದ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ವರ್ಗಾವಣೆಗೆ ಆದೇಶಿಸಲಾಗಿದೆ. ರೇವಣ್ಣ ಅವರ ಪರ ಸಿ ವಿ ನಾಗೇಶ್ ವಕಾಲತ್ತು ವಹಿಸಿದ್ದರೆ ಎಸ್‌ಐಟಿ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಜಗದೀಶ್ ವಾದ ಮಂಡಿಸಿದ್ದರು.

ಎಸ್‌ಐಟಿ ರೇವಣ್ಣ ವಿಚಾರಣೆಗೆ ರೇವಣ್ಣ ಸಹಕರಿಸುತ್ತಿಲ್ಲ. ಅಲ್ಲದೆ ಜಾಮೀನು ಸಿಕ್ಕರೆ ಸಾಕ್ಷ್ಯ ನಾಶ ಮಾಡುವ ಸಾಧ್ಯತೆಗಳಿವೆ. ಹೀಗಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಕೇಳಿದ್ದು, ನ್ಯಾಯಾಧೀಶರು ಏಳು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.

You cannot copy content of this page

Exit mobile version