Saturday, June 15, 2024

ಸತ್ಯ | ನ್ಯಾಯ |ಧರ್ಮ

ಕುಡಿಯುವ ನೀರು, ಅಂತರ್ಜಲ ಅಭಿವೃದ್ಧಿಗೆ ₹970 ಕೋಟಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ಬಜೆಟ್ ಭಾಷಣ (Karnataka Budget 2024) ಆರಂಭಿಸಿದಾಗ ಸದನ ಬಿಜೆಪಿ ನಾಯಕರ ಗದ್ದಲದಿಂದ ತುಂಬಿಹೋಗಿದ್ದು. ಇದರ ನಡುವೆಯೂ ಸಿಎಂ ಬಜೆಟ್ ಭಾಷಣ (budget speech)) ಮುಂದುವರೆಸಿದ್ದಾರೆ. ಈ ವರ್ಷದ ಬಜೆಟ್ ಗಾತ್ರ ₹ 3,71,383 ಕೋಟಿ.

ರಾಜ್ಯದಲ್ಲಿ ಜಲಸಂಪನ್ಮೂಲ ಅಭಿವೃದ್ಧಿಗೆ ಮೀಸಲಿಡುವುದಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ, ”ಕೊಪ್ಪಳ ಜಿಲ್ಲೆಯ ಯಲಬುರ್ಗಾ-ಕುಕನೂರು ತಾಲೂಕಿನ 38 ಕೆರೆಗಳಿಗೆ ಕುಡಿಯುವ ನೀರು ಹಾಗೂ ಅಂತರ್‌ಜಲ ಅಭಿವೃದ್ಧಿಗೆ ನೀರು ತುಂಬಿಸುವ ಯೋಜನೆಗೆ ಪ್ರಸಕ್ತ ಸಾಲಿನಲ್ಲಿ ₹ 970 ಕೋಟಿ ವೆಚ್ಚದಲ್ಲಿ ಬಜೆಟ್‌ ನೀಡಲಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಪಾಮನಕಲ್ಲೂರು ಹಾಗೂ ಇತರ ಪ್ರದೇಶಗಳಿಗೆ ನಾರಾಯಣಪುರ ನಾಲೆಯಿಂದ ₹ 990 ಕೋಟಿ. ಮೊತ್ತದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು.

Related Articles

ಇತ್ತೀಚಿನ ಸುದ್ದಿಗಳು