Tuesday, June 18, 2024

ಸತ್ಯ | ನ್ಯಾಯ |ಧರ್ಮ

16 ಕೆರೆಗಳ ನಿರ್ಮಾತೃ ‘ಆಧುನಿಕ ಭಗೀರಥ’ ಖ್ಯಾತಿಯ ಕಾಮೇಗೌಡ ವಿಧಿವಶ

16 ಕೆರೆಗಳನ್ನು ನಿರ್ಮಿಸುವ ಮೂಲಕ ದೇಶದ ಗಮನ ಸೆಳೆದಿದ್ದ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ದಾಸನದೊಡ್ಡಿ ಗ್ರಾಮದ ಕಲ್ಮನೆ ಕಾಮೇಗೌಡ ವಿಧಿವಶರಾಗಿದ್ದಾರೆ.

86 ವರ್ಷದ ಕಾಮೇಗೌಡರು ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಮುಂಜಾನೆ ವಿಧಿವಶರಾಗಿದ್ದು, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಹಲವು ವರ್ಷಗಳ ಹಿಂದೆ ಕುಂದೂರು ಬೆಟ್ಟಕ್ಕೆ ಕುರಿ ಮೇಯಿಸಲು ಹೋಗಿದ್ದ ಕಾಮೇಗೌಡರಿಗೆ ವಿಪರೀತ ದಾಹವಾಗಿ ನೀರಿಗಾಗಿ ಪರದಾಡಿದ್ದರು. ಬಳಿಕ ಸ್ವಲ್ಪ ದೂರದ ಮನೆಗೆ ಹೋಗಿ ನೀರು ಕೇಳಿ ದಾಹ ತೀರಿಸಿಕೊಂಡಿದ್ದರು. ಆದರೆ ಪ್ರಾಣಿಗಳ ಪರಿಸ್ಥಿತಿ ಏನು ಎನ್ನುವ ಚಿಂತೆ ಅವರಿಗೆ ಕಾಡಿತ್ತು. ಹೀಗಾಗಿ ಗುಡ್ಡದಲ್ಲಿ ಕೆರೆ ನಿರ್ಮಾಣಕ್ಕೆ ಮುಂದಾದರು.

ಆಧುನಿಕ ಭಗೀರಥ ಕಾಮೇಗೌಡರ ಸಾಮಾಜಿಕ ಕಾರ್ಯಕ್ಕೆ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ, ಪುರಸ್ಕಾರಗಳು ಬಂದಿವೆ.

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ಕಾಮೇಗೌಡರ ಕಾರ್ಯವನ್ನು ಶ್ಲಾಘಿಸಿದ್ದರು.

Related Articles

ಇತ್ತೀಚಿನ ಸುದ್ದಿಗಳು