Thursday, June 13, 2024

ಸತ್ಯ | ನ್ಯಾಯ |ಧರ್ಮ

ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿವೈ ಚಂದ್ರಚೂಡ್ ನೇಮಕ: ನವೆಂಬರ್ 9 ರಂದು ಪ್ರಮಾಣ ವಚನ

ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಡಿವೈ ಚಂದ್ರಚೂಡ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ.

ಹಾಲಿ ಸಿಜೆಐ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ತಮ್ಮ 65 ನೇ ವಯಸ್ಸಿಗೆ ಅಧಿಕಾರದಿಂದ ನಿವೃತ್ತಿ ಆಗಿದ್ದಾರೆ. ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿವೈ ಚಂದ್ರಚೂಡ್ ಅವರು ನವೆಂಬರ್ 9 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇದರ ಕುರಿತು ಟ್ವೀಟ್‌ ಮಾಡಿರುವ ಕಾನೂನು ಸಚಿವರು, ʼಗೌರವಾನ್ವಿತ ರಾಷ್ಟ್ರಪತಿಗಳು ಡಾ. ಜಸ್ಟಿಸ್ ಡಿವೈ ಚಂದ್ರಚೂಡ್, ನ್ಯಾಯಾಧೀಶರು, ಸುಪ್ರೀಂ ಕೋರ್ಟ್ ಅವರನ್ನು ನವೆಂಬರ್ 9, 22 ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಾಧೀಶರನ್ನಾಗಿ ನೇಮಿಸುತ್ತಾರೆ” ಎಂದು ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು