Friday, June 28, 2024

ಸತ್ಯ | ನ್ಯಾಯ |ಧರ್ಮ

ರಾಷ್ಟ್ರ ಪ್ರಶಸ್ತಿ ವಿಜೇತರಿಗೆ ವಾಣಿಜ್ಯ ಮಂಡಳಿ ಸನ್ಮಾನ

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಕನ್ನಡಕ್ಕೆ ಮೂರು ಪ್ರಶಸ್ತಿಗಳು ಲಭಿಸಿವೆ. ವಿಶಿಷ್ಟ ಕಥಾಹಂದರದ ‘ಡೊಳ್ಳು’ ಸಿನಿಮಾಗೆ ಅತ್ಯುತ್ತಮ ಕನ್ನಡ ಪ್ರಾದೇಶಿಕ ಸಿನಿಮಾ ವಿಭಾಗ ಹಾಗೂ ಸಿಂಕ್ ಸೌಂಡ್ ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ದೊರೆತಿದೆ.  ‘ತಲೆದಂಡ’ ಚಿತ್ರಕ್ಕೆ ಪರಿಸರ ಕಾಳಜಿಯ ಕಥಾವಸ್ತುವುಳ್ಳ ರಾಷ್ಟ್ರ ಪ್ರಶಸ್ತಿಯ ಗರಿ ಒಲಿದಿದೆ.  ‘ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಸಿನಿಮಾ’ ವಿಭಾಗದಲ್ಲಿ ಗಿರೀಶ್​ಕಾಸರವಳ್ಳಿ ನಿರ್ದೇಶನದ ‘ನಾದದ ನವನೀತ’ ಚಿತ್ರ ಪ್ರಶಸ್ತಿಗೆ ಭಾಜನವಾಗಿದ್ದು, ಇದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ.

ಮೊನ್ನೆ ಫಿಲ್ಮ್‌ ಚೇಂಬರ್ ವತಿಯಿಂದ ರಾಷ್ಟ್ರ ಪ್ರಶಸ್ತಿ ವಿಜೇತರನ್ನು ಸನ್ಮಾನ ಮಾಡಲಾಯಿತು. ಡೊಳ್ಳು ಸಿನಿಮಾ ನಿರ್ಮಾಪಕರಾದ ಪವನ್ ಒಡೆಯರ್ ಹಾಗೂ ಅಪೇಕ್ಷಾ ಪುರೋಹಿತ್ ದಂಪತಿ, ಚಿತ್ರದ ನಿರ್ದೇಶಕ ಸಾಗರ್ ಪುರಾಣಿಕ್ ಹಾಗೂ ‘ತಲೆದಂಡ’ ಚಿತ್ರದ ನಿರ್ಮಾಪಕಿ ಡಾ. ಹೇಮಾಮಾಲಿನಿ ಕೃಪಾಕರ್ ಸೇರಿದಂತೆ ಈ ಬಾರಿ ಪ್ರಶಸ್ತಿ ವಿಜೇತರಿಗೆ ಫಿಲ್ಮಂ ಚೇಂಬರ್ ಅಧ್ಯಕ್ಷರಾದ ಭಾ.ಮಾ.ಹರೀಶ್ ಸಾರಥ್ಯದಲ್ಲಿ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಫಿಲ್ಮಂ ಚೇಂಬರ್ ಪದಾಧಿಕಾರಿಗಳು, ಮಾಜಿ ಅಧ್ಯಕ್ಷ ಚಿನ್ನೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದರು.

Related Articles

ಇತ್ತೀಚಿನ ಸುದ್ದಿಗಳು