Monday, June 17, 2024

ಸತ್ಯ | ನ್ಯಾಯ |ಧರ್ಮ

ಎಎಪಿ ಅಧಿಕಾರಕ್ಕೆ ಬಂದರೆ ಎಂಟು ನಗರಗಳಲ್ಲಿ ಪ್ರತಿ 4 ಕಿ. ಮೀ ಗೆ ಒಂದು ಶಾಲೆ: ಸಿಸೋಡಿಯಾ

ಅಹಮದಾಬಾದ್: ಗುಜರಾತ್‌ನಲ್ಲಿ ಆಮ್‌ ಆದ್ಮಿ ಪಕ್ಷ (ಎಎಪಿ) ಅಧಿಕಾರಕ್ಕೆ ಬಂದರೆ ಎಂಟು ನಗರಗಳಲ್ಲಿ ಪ್ರತಿ 4 ಕಿ.ಮೀಗೆ ಒಂದು ಸರ್ಕಾರಿ ಶಾಲೆ ನಿರ್ಮಿಸುವುದಾಗಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಗುಜರಾತ್‌ನಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು, ‘ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ 9 ತಾಸುಗಳ ಕಾಲ ನನ್ನನ್ನು ವಿಚಾರಣೆ ನಡೆಸಿದೆ. ನಾನು ಎಲ್ಲದಕ್ಕೂ ಸಿದ್ಧನಾಗಿದ್ದೇನೆ. ಹೀಗಾಗಿ ಜೈಲಿಗೆ ಹೋಗುವುದಕ್ಕೂ ನಾನು ಹೆದರುವುದಿಲ್ಲ ಆದರೆ, ಗುಜರಾತ್‌ನಲ್ಲಿ ಶಾಲೆಗಳ ನಿರ್ಮಾಣ ಮಾತ್ರ ನಿಲ್ಲುವುದಿಲ್ಲ’ ಎಂದು ಹೇಳಿದ್ದಾರೆ.

ಗುಜರಾತ್‌ನ ಜನರು ಈಗಾಗಲೇ ತಮ್ಮ ಮಕ್ಕಳಿಗಾಗಿ ಶಾಲೆಗಳನ್ನು ನಿರ್ಮಿಸಲು ತೀರ್ಮಾನ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಶಾಲೆಗಳನ್ನು ನಿರ್ಮಿಸುವ ಪಕ್ಷವನ್ನೇ ಅವರು ಆಯ್ಕೆ ಮಾಡಲಿದ್ದಾರೆ ಎಂದು ಸಿಸೋಡಿಯಾ ತಿಳಿಸಿದ್ದಾರೆ.

ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇ.ಡಿ. ಹಾಗೂ ಸಿಬಿಐಯನ್ನು ದುರುಪಯೋಗ ಪಡಿಸಿಕೊಳ್ಳಬಹುದು. ಆದರೆ, ಶಾಲೆ ನಿರ್ಮಿಸುವವರನ್ನು ಅವರು ಜೈಲಿಗೆ ಹಾಕಲಾರರು ಎಂದು ಹೇಳಿದ್ದಾರೆ.

 ಎಎಪಿ ತಂಡ ನಡೆಸಿದ ಸಮೀಕ್ಷೆಯ ಪ್ರಕಾರ, ಗುಜರಾತ್‌ನ ಒಟ್ಟು 48,000 ಸರ್ಕಾರಿ ಶಾಲೆಗಳಲ್ಲಿ 32,000 ಶಾಲೆಗಳು ಕೆಟ್ಟ ಸ್ಥಿತಿಯಲ್ಲಿವೆ ಎಂದು ತಿಳಿದುಬಂದಿದೆ. ಎಎಪಿ ಸರ್ಕಾರವು ಗುಜರಾತ್‌ನಲ್ಲಿ ಅಧಿಕಾರಕ್ಕೆ ಬಂದರೆ, ಅಹಮದಾಬಾದ್, ಸೂರತ್, ವಡೋದರಾ, ಜಾಮ್‌ನಗರ, ರಾಜಕೋಟ, ಭಾವನಗರ, ಗಾಂಧಿನಗರ ಮತ್ತು ಜುನಾಗಢಗಳಲ್ಲಿ ಪ್ರತಿ 4 ಕಿ.ಮೀಗೆ ಒಂದು ಸರ್ಕಾರಿ ಶಾಲೆಯನ್ನು ನಿರ್ಮಿಸಲಿದೆ ಎಂದು ಸಿಸೋಡಿಯಾ ಹೇಳಿದ್ದಾರೆ.

‘ಅಧಿಕಾರಕ್ಕೆ ಬಂದ ಬಳಿಕ ಒಂದು ವರ್ಷದೊಳಗೆ, ಪ್ರತಿ 4 ಕಿ.ಮೀಗೆ ಒಂದು ಭವ್ಯವಾದ ಸರ್ಕಾರಿ ಶಾಲೆಯನ್ನು ನಿರ್ಮಿಸುತ್ತೇವೆ. ಆ ಶಾಲೆಗಳು ಖಾಸಗಿ ಸರ್ಕಾರಿ ಶಾಲೆಗಳು ಉತ್ತಮವಾಗಿರುತ್ತವೆ’ ಎಂದು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು