Monday, June 17, 2024

ಸತ್ಯ | ನ್ಯಾಯ |ಧರ್ಮ

ಕಾಂಗ್ರೆಸ್ ಸಮಿತಿ: ಕಾಂಗ್ರೆಸ್ ಭವನದಿಂದ ಮುಖ್ಯಮಂತ್ರಿ ನಿವಾಸದ ವರೆಗೆ ಬೃಹತ್ ಪ್ರತಿಭಟನೆ

ಬೆಂಗಳೂರು: ಇಂದು ಬೆಳಗ್ಗೆ 11:30ಕ್ಕೆ ಬೆಂಗಳೂರು ಕೇಂದ್ರ ಹಾಗು ದಕ್ಷಿಣ ಮತ್ತು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ, ರಸ್ತೆ ಗುಂಡಿ ಮುಚ್ಚುವಂತೆ ಆಗ್ರಹಿಸಿ ಬಿಜೆಪಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಾಗಿದೆ.

ಈ ಪ್ರತಿಭಟನೆಯು ರೇಸ್‌ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಮಹಾತ್ಮಗಾಂಧಿ ಪ್ರತಿಮೆ ಯಿಂದ ಹಿಡಿದು ಮುಖ್ಯಮಂತ್ರಿಗಳ ನಿವಾಸದ ವರೆಗೆ ಸಾಗಲಿದೆ.

ಬೆಂಗಳೂರು ನಗರದ ರಸ್ತೆ ಗುಂಡಿಗಳನ್ನು ಮುಚ್ಚುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಹೈಕೋರ್ಟ್ ಸರ್ಕಾರದ ಮುಖ್ಯ ಆಯುಕ್ತರನ್ನು ಕರೆಸಿ ಎಚ್ಚರಿಕೆ ನೀಡಿದರು ಸಹ ಸರ್ಕಾರದ ನಿರ್ಲಕ್ಷತನದ ಪರಿಣಾಮ ರಸ್ತೆ ಗುಂಡಿಗಳಿಂದ ವಾಹನಸವಾರರು ಸಾವಿಗಿಡಾಗುತ್ತಿರುವುದು ವಿಷಾದಕರ ಎಂದು ಕಾಂಗ್ರೆಸ್‌ ಸಮಿತಿ ಹೇಳಿದೆ.

ಈ ಪ್ರತಿಭಟನೆಯಲ್ಲಿ ಸನ್ಮಾನ್ಯ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ರಾಮಲಿಂಗಾ ರೆಡ್ಡಿ ರವರು, ನಗರದ ಸಂಸದರು, ಶಾಸಕರು, ಪಕ್ಷದ ಹಿರಿಯ ಮುಖಂಡರುಗಳು, ಮಾಜಿ ಮಹಾಪೌರರುಗಳು, ಮಾಜಿ ಬಿಬಿಎಂಪಿ ಸದಸ್ಯರುಗಳು ಹಾಗು ಮತ್ತಿತರರು ಭಾಗವಹಿಸಲ್ಲಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು