Wednesday, June 26, 2024

ಸತ್ಯ | ನ್ಯಾಯ |ಧರ್ಮ

ʼಫ್ರೀಡಂಮಾರ್ಚ್‌ʼ ಮೂಲಕ ಕಾಂಗ್ರೆಸ್‌ ಕರೆ

ಬೆಂಗಳೂರು: ಸ್ವತಂತ್ರ ಭಾರತದ 75ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ನಾಯಕರುಗಳು ಹಾಗೂ ಸಾವಿರಾರು ಜನರು ಸೇರಿ ಕೈಯಲ್ಲಿ ತ್ರಿವರ್ಣಧ್ವಜ ಹಿಡಿದು ಪಾದಯಾತ್ರೆ ನಡೆಸಿದರು.

ಇದೇ ವೇಳೆ ಆಗಸ್ಟ್ 15ರಂದು ಫ್ರೀಡಂಮಾರ್ಚ್ ಮೂಲಕ ಅತಿಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ನಮನ ಸಲ್ಲಿಸುವಂತೆ ಕಾಂಗ್ರೆಸ್‌ ಕರೆ ನೀಡಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಮ್ಮ ಟ್ವೀಟರ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಪಾದಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೇರಿದಂತೆ ಕಾಂಗ್ರೆಸ್‌ ಪಕ್ಷದ ಹಲವು ಶಾಸಕರು ಕೂಡ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು.

Related Articles

ಇತ್ತೀಚಿನ ಸುದ್ದಿಗಳು