ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಿಜೆಪಿ ತನ್ನ ಪಕ್ಷದಲ್ಲಿ ಚುನಾವಣೆ ನಡೆಸಲು ಸಾಧ್ಯವೇ? : ರಣದೀಪ್‌‌ ಸಿಂಗ್ ಸುರ್ಜೇವಾಲ

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ಬಿಜೆಪಿ ತನ್ನ ಪಕ್ಷದಲ್ಲಿ ಚುನಾವಣೆ ನಡೆಸಲು ಸಾಧ್ಯವೇ? : ರಣದೀಪ್‌‌ ಸಿಂಗ್ ಸುರ್ಜೇವಾಲ

ಬೆಂಗಳೂರು : AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಬೆಂಗಳೂರಿಗೆ ಆಗಮಿಸಿದ್ದು, ಈ ಸಲುವಾಗಿ ಹಮ್ಮಿಕೊಂಡಿದ್ದ ಸರ್ವೋದಯ ಸಮಾವೇಶದಲ್ಲಿ ಭಾಗವಹಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ʼ40% ಕಮಿಷನ್ ಸರ್ಕಾರ ಕಿತ್ತೊಗೆದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವ ಸಂಕಲ್ಪ ಮಾಡೋಣʼ ಎಂದು ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ  ರಣದೀಪ್‌ ಸಿಂಗ್‌,  ʼಇದು ಇತಿಹಾಸ ರಚಿಸುವ ದಿನ. ರಾಜ್ಯದ ಜನ ದಶಕಗಳಿಂದ ಖರ್ಗೆ ಅವರನ್ನು ಬೆಳೆಸಿಕೊಂಡು ಬಂದಿದೆ. ಬಿಜೆಪಿ ತನ್ನ ಪಕ್ಷದಲ್ಲಿ ಚುನಾವಣೆ ನಡೆಸಲು ಸಾಧ್ಯವೇ? ಸೋನಿಯಾ ಗಾಂಧಿ ಅವರು ಇದನ್ನು ಮಾಡಿ ತೋರಿಸಿದ್ದಾರೆ. ಕಾರ್ಮಿಕರ ಮಗ, ದಲಿತ ವ್ಯಕ್ತಿಯನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದೆ. ಅವರು ಬಡವರು, ಶೋಷಿತರ ಪರ ಧ್ವನಿಯಾಗಿ ಹೋರಾಟ ಮಾಡಿದ್ದಾರೆʼ ಎಂದು ಹೇಳಿದರು.

ʼದೇಶದ ಮೂಲೆ ಮೂಲೆಯ ಕಾರ್ಯಕರ್ತರಿಗೆ ಖರ್ಗೆ ಅವರ ಮೇಲೆ ನಂಬಿಕೆ ಇದೆ. ಈ ವೇದಿಕೆ ಮೂಲಕ ಸೋನಿಯಾ ಗಾಂಧಿ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಕಳೆದ 2 ದಶಕಗಳಿಂದ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಸರ್ವಸ್ವ ತ್ಯಾಗ ಮಾಡಿ ಸಂಘಟನೆ ಮಾಡಿದ್ದಾರೆʼ ಎಂದು ಮಾತನಾಡಿದರು.

ʼಈ ಸಮಯದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ 40% ಕಮಿಷನ್ ಸರ್ಕಾರ ಕಿತ್ತೊಗೆದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವ ಸಂಕಲ್ಪ ಮಾಡೋಣʼ ಎಂದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು