ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

‘ಹೊಂದಿಸಿ ಬರೆಯಿರಿ’ ಚಿತ್ರದ ಪೆಪ್ಪಿ ಸಾಂಗ್ ರಿಲೀಸ್: ಸಿನಿಮಾ ಬಿಡುಗಡೆ ಮುಂದೂಡಿದ ಚಿತ್ರತಂಡ

PPeepal Media Desk

Peepal Media Desk • ಸಿನಿಮಾ

• 1 ನಿಮಿಷದ ಓದು

‘ಹೊಂದಿಸಿ ಬರೆಯಿರಿ’ ಚಿತ್ರದ ಪೆಪ್ಪಿ ಸಾಂಗ್ ರಿಲೀಸ್: ಸಿನಿಮಾ ಬಿಡುಗಡೆ ಮುಂದೂಡಿದ ಚಿತ್ರತಂಡ

ಬೆಂಗಳೂರು: ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದ ಬಹು ತಾರಾಗಣದ ‘ಹೊಂದಿಸಿ ಬರೆಯಿರಿ’ ಸಿನಿಮಾ ದಿನದಿಂದ ದಿನಕ್ಕೆ ಸ್ಯಾಂಡಲ್ ವುಡ್ ಸಿನಿಪ್ರಿಯರ ಗಮನ ಸೆಳೆಯುತ್ತಿದೆ. ಸಿನಿಮಾದ ಪ್ರತಿಯೊಂದು ಸ್ಯಾಂಪಲ್‌ಗಳು ಚಿತ್ರರಸಿಕರ ಮನಗೆದ್ದಿವೆ. ಬಿಡುಗಡೆಯ ಹೊಸ್ತಿಲಲ್ಲಿರುವ ಸಿನಿಮಾ ತಂಡ ಭರ್ಜರಿ ಪ್ರಚಾರದ ಮೂಲಕವೂ ಗಮನ ಸೆಳೆಯುತ್ತಿದೆ. ‘ಹೊಂದಿಸಿ ಬರೆಯಿರಿ’ ಹಾಡುಗಳ ಮೆರವಣಿಗೆ ಆರಂಭವಾಗಿದ್ದು, ಈಗಾಗಲೇ ಬಿಡುಗಡೆಯಾದ ಎರಡು ಹಾಡುಗಳು ಕೇಳುಗರ ಮನ ಗೆದ್ದಿದೆ, ಇದೀಗ ಚಿತ್ರದ ಬಹು ನಿರೀಕ್ಷಿತ ಮೂರನೇ ಸಾಂಗ್ ಬಿಡುಗಡೆ ಮಾಡಿದೆ ಚಿತ್ರತಂಡ.

ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಸಾಹಿತ್ಯದಲ್ಲಿ ಅರಳಿರುವ ‘ತಲೆಹರಟೆ ಮಾಡುತ್ತಿದೆ ಈ ಹೃದಯ’ ಎಂಬ ಪೆಪ್ಪಿ ಸಾಂಗ್ ಇದಾಗಿದೆ. ಐಶ್ವರ್ಯ ರಂಗರಾಜನ್, ವರುಣ್ ರಾಮಚಂದ್ರ ಈ ಹಾಡಿಗೆ ದನಿಯಾಗಿದ್ದಾರೆ. ಜೋ ಕೋಸ್ಟ ಅವರ ಫ್ರೆಶ್ ಮ್ಯೂಸಿಕ್ ಎಲ್ಲರ ಗಮನ ಸೆಳೆಯುತ್ತಿದೆ. ಈ ಹಿಂದೆ ಬಿಡುಗಡೆಯಾಗಿದ್ದ ‘ಬೆಳಕಲಿ’ ಹಾಗೂ ‘ಓ ಕವನ’ ಹಾಡುಗಳು ಸಿನಿರಸಿಕರಿಂದ ಮೆಚ್ಚುಗೆ ಗಳಿಸಿಕೊಂಡಿತ್ತು. ಈ ಹಾಡು ಕೂಡ ಕೇಳುಗರನ್ನು ಮೋಡಿ ಮಾಡುವ ಎಲ್ಲಾ ಲಕ್ಷಣಗಳನ್ನೂ ಹೊಂದಿದೆ.

ಎಲ್ಲಾ ಅಂದುಕೊಂಡಂತೆ ಆಗಿದ್ರೆ ನವೆಂಬರ್ 18ರಂದು ಸಿನಿಮಾ ಬಿಡುಗಡೆಯಾಗಬೇಕಿತ್ತು. ಚಿತ್ರತಂಡ ಕೂಡ ರಿಲೀಸ್ ಡೇಟ್ ಅನೌನ್ಸ್ ಮಾಡಿತ್ತು. ಆದ್ರೆ ಸಿನಿಮಾದ ಅಂತಿಮ ಹಂತದ ತಾಂತ್ರಿಕ ಕೆಲಸಗಳು ಬಾಕಿ ಇರುವುದರಿಂದ ಬಿಡುಗಡೆಯನ್ನು ಚಿತ್ರತಂಡ ಮುಂದೂಡಿದೆ. ನವೆಂಬರ್ 18ರ ಬದಲಾಗಿ ಹೊಸದಾದ ರಿಲೀಸ್ ಡೇಟ್ ಸಿನಿಮಾ ತಂಡ ಅನೌನ್ಸ್ ಮಾಡಲಿದೆ ಎಂದು ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ತಿಳಿಸಿದ್ದಾರೆ.

ಪರಿಸ್ಥಿತಿಗಳೊಂದಿಗೆ ಹೊಂದಿಕೊಂಡು ಸಾಗುವ ಬದುಕಿನ ಪಯಣವೇ ಜೀವನ ಎನ್ನುವ ಒನ್ ಲೈನ್ ಕಹಾನಿ ಸುತ್ತ ಹೆಣೆಯಲಾದ ಸುಂದರವಾದ ಕಥಾಹಂದರವೇ ‘ಹೊಂದಿಸಿ ಬರೆಯಿರಿ’. ರಾಮೇನಹಳ್ಳಿ ಜಗನ್ನಾಥ್ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರದಲ್ಲಿ ಐದು ಜನ ಸ್ನೇಹಿತರ ಬದುಕಿನ ಒಂದೊಂದು ಚಿತ್ರಣವಿದೆ ಹಾಗೂ ಭಾವನಾತ್ಮಕ ಜರ್ನಿ ಇದೆ.

ಪ್ರವೀಣ್ ತೇಜ್, ಐಶಾನಿ ಶೆಟ್ಟಿ, ಸಂಯುಕ್ತ ಹೊರನಾಡು, ಶ್ರೀಮಹಾದೇವ್, ಭಾವನಾ ರಾವ್, ನವೀನ್ ಶಂಕರ್, ಅರ್ಚನಾ ಜೋಯಿಸ್, ಅನಿರುದ್ಧ್ ಆಚಾರ್ಯ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಸುನೀಲ್ ಪುರಾಣಿಕ್, ಪ್ರವೀಣ್ ಡಿ ರಾವ್, ಧರ್ಮೇಂದ್ರ ಅರಸ್, ನಂಜುಂಡೇ ಗೌಡ, ಸುಧಾ ನರಸಿಂಹರಾಜು ಒಳಗೊಂಡ ದೊಡ್ಡ ತಾರಾಬಳಗ ಸಿನಿಮಾದಲ್ಲಿದೆ.

ಜೋ ಕೋಸ್ಟ ಸಂಗೀತ, ಕೆ ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಗುಳ್ಟು ಚಿತ್ರ ಖ್ಯಾತಿಯ ಶಾಂತಿ ಸಾಗರ್ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ. ಟಗರು ಖ್ಯಾತಿಯ ಮಾಸ್ತಿ, ಪೊಗರು ಖ್ಯಾತಿಯ ಪ್ರಶಾಂತ್ ರಾಜಪ್ಪ ಹಾಗೂ ಜಗನ್ನಾಥ್ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. “ಸಂಡೇ ಸಿನಿಮಾಸ್ “ಬ್ಯಾನರ್ ನಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಸ್ನೇಹಿತರು ಸಿನಿಮಾ ನಿರ್ಮಾಣ ಮಾಡಿದ್ದಾರೆ.

PPeepal Media Desk

Peepal Media Desk

Peepal Media · ಸಿನಿಮಾ ವಿಭಾಗ

ಸಂಬಂಧಿತ ಸುದ್ದಿಗಳು