Wednesday, June 26, 2024

ಸತ್ಯ | ನ್ಯಾಯ |ಧರ್ಮ

ಮತದಾರರ ಮಾಹಿತಿ ಕಳವು ಆರೋಪ: ಕಾಂಗ್ರೆಸ್‌ನಿಂದ ದೂರು

ಬೆಂಗಳೂರು : ಅರಿವು ಕಾರ್ಯಕ್ರಮ ಎಂಬ ಹೆಸರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಎಂದು ಮತದಾರರ ಮಾಹಿತಿಯನ್ನು ಕಳವು ಮಾಡಲಾಗಿದೆ ಎಂದು ಆರೋಪಿಸಿ, ಹಲವು ಕಾಂಗ್ರೆಸ್‌ ಮುಖಂಡರು ಸೇರಿ ನಡೆದಿರುವ ಅಕ್ರಮದ ವಿರುದ್ದ ಕೇಂದ್ರ ಚುನಾವಣೆ ಆಯೋಗದ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

ಬಿಬಿಎಂಪಿ  ವ್ಯಾಪ್ತಿಯಲ್ಲಿ ಬರುವ ಮನೆಗಳಿಗೆ ಭೇಟಿ ನೀಡಿ ಆನ್‌ಲೈನ್‌ ಅಥವಾ VHA(ವೋಟರ್‌ ಹೆಲ್ಪ್‌ ಲೈನ್) ಮುಖಾಂತರ ಅರ್ಜಿಗಳನ್ನು ಸಲ್ಲಿಸುವ ಸಲುವಾಗಿ ಅರಿವು ಕಾರ್ಯಕ್ರಮಗಳನ್ನು ನಡೆಸಲು ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ  ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಅನುಮತಿ ನೀಡಿತ್ತು. ಅದಾಗಲೇ ಸಂಸ್ಥೆಯು ಸುಮಾರು 7-8 ಸಾವಿರ ಸಿಬ್ಬಂದಿ ಮನೆ, ಮನೆಗೆ ಹೋಗಿ ಮತದಾರರ ಮಾಹಿತಿ ಕಲೆ ಹಾಕಿದ್ದು.ಕೆಲವರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿತ್ತು. ಈ ವಿರುದ್ದ ಕೆಲವು ವಿರೋಧಗಳು ವ್ಯಕ್ತವಾದ ನಂತರ ನೀಡಿದ ಆದೇಶವನ್ನು ಹಿಂಪಡೆದಿದ್ದಾರೆ.

ಈ ಹಿನ್ನೆಲೆಯಲ್ಲಿ ಹಲವು ಕಾಂಗ್ರೆಸ್‌ ಮುಖ್ಯಸ್ಥರು ಸೇರಿ, ಮತದಾರರ ಮಾಹಿತಿ ಕಳವು, ಪಟ್ಟಿಯಿಂದ ನಿರ್ದಿಷ್ಟ ಮತದಾರರ ಹೆಸರು ಕೈಬಿಟ್ಟಿರುವುದು ಸೇರಿದಂತೆ ಮತದಾರರ ಪಟ್ಟಿ ಪರಿಷ್ಕರಣೆಯ ಅಕ್ರಮಗಳ ಕುರಿತು ಕೇಂದ್ರ ಚುನಾವಣೆ ಆಯೋಗದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ಇಂದು ದೂರು ನೀಡಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಅಗ್ರಹಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌, ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾದ ಎಂ.ಬಿ ಪಾಟೀಲ್‌, ಶಾಸಕರಾದ ದಿನೇಶ್‌ ಗುಂಡೂರಾವ್‌, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ರಿಜ್ವಾನ್‌ ಅರ್ಷದ್‌, ಕೃಷ್ಣ ಬೈರೇಗೌಡ, ಯು.ಬಿ ವೆಂಕಟೇಶ್‌, ಕೆ.ಜೆ ಜಾರ್ಜ್‌, ಎಂ.ಹೆಚ್‌ ರೇವಣ್ಣ ದೂರು ನೀಡುವ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು