Friday, June 14, 2024

ಸತ್ಯ | ನ್ಯಾಯ |ಧರ್ಮ

ಭಾರತ ಐಕ್ಯತಾ ಯಾತ್ರೆಯಲ್ಲಿ ಕೆಸಿ ವೇಣುಗೋಪಾಲ್‌ಗೆ ಗಾಯ

ಇಂದೋರ್‌( ಮಧ್ಯಪ್ರದೇಶ): ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ಭಾರತ್‌ ಐಕ್ಯತಾ ಯಾತ್ರೆಯಲ್ಲಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಅವರು ಕೆಳಗೆ ಬಿದ್ದು ಗಾಯಗೊಂಡಿದ್ದಾರೆ.

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆಯುತ್ತಿರುವ ಐದನೇ ದಿನದ ಭಾರತ ಐಕ್ಯತಾ ಯಾತ್ರೆಯಲ್ಲಿ ಭಾನುವಾರದಂದು ವೇಣುಗೋಪಾಲ್‌ ಅವರು ಪೆಟ್ಟು ಮಾಡಿಕೊಂಡಿದ್ದಾರೆ. ರಾಹುಲ್‌ ಗಾಂಧಿಯವರನ್ನು ಭೇಟಿ ಮಾಡಲು, ಯಾತ್ರೆಯಲ್ಲಿ ಹೆಜ್ಜೆ ಹಾಕಲು ಬಂದ ಜನರ ಗುಂಪನ್ನು ನಿಯಂತ್ರಣ ಮಾಡುವುದರಲ್ಲಿ ಅಲ್ಲಿನ ಪೊಲೀಸರು ವಿಫಲಗೊಂಡಿದ್ದು, ಈ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಲುಕಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೊಪಾಲ್‌ ಅವರಿಗೆ ಕೈ ಮತ್ತು ಮೊಣಕಾಲಿಗೆ ಗಾಯಗಳಾಗಿದ್ದು, ಯಾತ್ರೆಯ ನಡವೆಯೇ ಪ್ರಥಮ ಚಿಕಿತ್ಸೆ ನೀಡಲಾಗಿದೆ.

ರಾಹುಲ್‌ ಗಾಂಧಿಯನ್ನು ನೋಡಲು ಬಂದ ಜನಜಂಗುಳಿಯನ್ನು ನಿಯಂತ್ರಣ ಮಾಡುವುದರಲ್ಲಿ ಪೊಲೀಸರು ವಿಫಲರಾಗಿರುವ ಕಾರಣ ಈ ಘಟನೆ ನಡೆದಿದ್ದು, ಚಿಕಿತ್ಸೆಯ ನಂತರ ಸ್ವಲ್ಪ ಸಮಯದ ಕಾಲ ವಿಶ್ರಾಂತಿ ಪಡೆದು, ನಿಧಾನವಾಗಿ ಹೆಜ್ಜೆ ಹಾಕಿ ಯಾತ್ರೆಯಲ್ಲಿ ಮುಂದುವರೆದಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು