ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ತಮಿಳುನಾಡು: ವಿದ್ಯುತ್ ಸಂಪರ್ಕದೊಂದಿಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಲು ವಿಶೇಷ ಶಿಬಿರಗಳು ಆರಂಭ

PPeepal Media Desk

Peepal Media Desk • ದೇಶ

• 1 ನಿಮಿಷದ ಓದು

<strong>ತಮಿಳುನಾಡು: ವಿದ್ಯುತ್ ಸಂಪರ್ಕದೊಂದಿಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಲು ವಿಶೇಷ ಶಿಬಿರಗಳು ಆರಂಭ</strong>

ತಮಿಳುನಾಡು: ಇಲ್ಲಿನ ಜನರೇಷನ್ ಮತ್ತು ಡಿಸ್ಟ್ರಿಬ್ಯೂಷನ್ ಕಾರ್ಪೊರೇಷನ್ (Tangedco) ಸೋಮವಾರ ವಿದ್ಯುತ್ ಸಂಪರ್ಕದೊಂದಿಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಲು ವಿಶೇಷ ಶಿಬಿರಗಳು ಆರಂಭಿಸಿದೆ.

ಹೊಸ ದಾಖಲಾತಿಗಳು ಮತ್ತು ತಮ್ಮ ವಿವರಗಳನ್ನು ಬದಲಾಯಿಸಲು ಬಯಸುವ ಗ್ರಾಹಕರಿಗಾಗಿ ಈ ಶಿಬಿರಗಳನ್ನು 2,811 ವಿಭಾಗ ಕಚೇರಿಗಳಲ್ಲಿ ಆಯೋಜಿಸಲಾಗಿದೆ ಎಂದು Tangedco ತಿಳಿಸಿದೆ.

ಈ ಕುರಿತು ತಮಿಳುನಾಡು ವಿದ್ಯುತ್ ಸಚಿವ ವಿ.ಸೆಂಥಿಲ್ ಬಾಲಾಜಿ ಸುದ್ದಿಗಾರರೊಂದಿಗೆ ಮಾತನಾಡಿ, ಒಬ್ಬ ವ್ಯಕ್ತಿಯು ಅನೇಕ ಸಂಪರ್ಕಗಳನ್ನು ಹೊಂದಿದ್ದರೂ, ಅವುಗಳನ್ನು ಅವರ ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಮಾಡುವುದರಿಂದ ಸ್ಥಾನಮಾನದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ. ಇದರಿಂದ ಅವರು 100 ಯುನಿಟ್ ಉಚಿತ ವಿದ್ಯುತ್ ಪಡೆಯುವುದನ್ನು ಮುಂದುವರಿಸುತ್ತಾರೆ ಎಂದು ಹೇಳಿದರು.

ಉತ್ಸವ ದಿನಗಳನ್ನು ಹೊರತುಪಡಿಸಿ ಡಿಸೆಂಬರ್ 31 ರವರೆಗೆ ಬೆಳಿಗ್ಗೆ 10.30 ರಿಂದ ಸಂಜೆ 5.15 ರವರೆಗೆ ಶಿಬಿರಗಳು ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದ್ದಾರೆ.

ಅಧಿಕಾರಿಗಳು ಎಲ್ಲಾ ವಿಭಾಗ ಕಚೇರಿಗಳಲ್ಲಿ ಹಿರಿಯ ನಾಗರಿಕರು ಮತ್ತು ವಿಕಲಚೇತನ ಗ್ರಾಹಕರಿಗಾಗಿ ಪ್ರತ್ಯೇಕ ಕೌಂಟರ್ ಅನ್ನು ತೆರೆಯುತ್ತಾರೆ. ʼಒಟ್ಟು 2.33 ಕೋಟಿ ದೇಶೀಯ ವಿದ್ಯುತ್ ಸಂಪರ್ಕಗಳಲ್ಲಿ, ಸುಮಾರು 15 ಲಕ್ಷ ಜನರು ಈಗಾಗಲೇ ತಮ್ಮ ಆಧಾರ್ ಸಂಪರ್ಕಗಳನ್ನು ಲಿಂಕ್ ಮಾಡಿದ್ದಾರೆʼ ಎಂದು ಸಚಿವರು ಹೇಳಿದರು.

ಆಧಾರ್ ಸಂಖ್ಯೆಯನ್ನು ವಿದ್ಯುತ್ ಸಂಪರ್ಕಗಳೊಂದಿಗೆ ಲಿಂಕ್ ಮಾಡುವ ಬಗ್ಗೆ ಸಂದೇಶಗಳನ್ನು ಗ್ರಾಹಕರ ಮೊಬೈಲ್ ಸಂಖ್ಯೆಗಳಿಗೆ ಕಳುಹಿಸಲಾಗುತ್ತಿದೆ ಎಂದು ಬಾಲಾಜಿ ಹೇಳಿದರು.

ಕಳೆದ ಕೆಲವು ದಿನಗಳಿಂದ ಗೃಹಬಳಕೆ, ಕೈಮಗ್ಗ, ವಿದ್ಯುತ್ ಮಗ್ಗ, ಗುಡಿಸಲುಗಳು ಮತ್ತು ಕೃಷಿ ವಿಭಾಗಗಳ ಅಡಿಯಲ್ಲಿ ಸಂಪರ್ಕಗಳ ಆಧಾರ್ ಲಿಂಕ್ ನಡೆಯುತ್ತಿದೆ ಎಂದರು.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು