Thursday, June 20, 2024

ಸತ್ಯ | ನ್ಯಾಯ |ಧರ್ಮ

ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ: ಸಿಎಂ ಬೊಮ್ಮಾಯಿ

ನವದೆಹಲಿ: ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ ಎಂದು  ಲೆಕ್ಕ ಹಾಕಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಸೈಲೆಂಟ್ ಸುನೀಲ್ ಜೊತೆಗೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡ‌ ವಿಚಾರದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಸಿಎಂ ಬೊಮ್ಮಾಯಿಯವರು ಮಂಗಳವಾರದಂದು ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರ ಜೊತೆ  ಮಾತನಾಡಿದ ಸಿಎಂ, ʼಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಸಮಯ ಕೇಳಿದ್ದು, ನಾಳೆ ಸಮಯ ದೊರೆಯುವ ವಿಶ್ವಾಸವಿದೆʼ ಎಂದರು.

ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ , ಭೂಪೇಂದ್ರ ಯಾದವ್ ಮತ್ತು ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದು,  ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್   ಜೊತೆಗೆ ಮೇಕೆದಾಟು, ಭದ್ರಾ ಮೇಲ್ಡಂಡೆ ಯೋಜನೆ, ಮಹದಾಯಿ ಬಗ್ಗೆ ಚರ್ಚೆ ಮಾಡಲಿರುವುದಾಗಿ ತಿಳಿಸಿದರು.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು  ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಉದ್ಘಾಟನೆಗೆ ಆಹ್ವಾನಿಸಲಾಗುವುದು ಹಾಗೂ ಭೂಪೇಂದ್ರ ಯಾದವ್ ಅವರೊಂದಿಗೆ  ಪರಿಸರ ಸಂಬಂಧಿ ಯೋಜನೆಗಳ ಬಗ್ಗೆ ಚರ್ಚೆ ಮಾಡಲಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

Related Articles

ಇತ್ತೀಚಿನ ಸುದ್ದಿಗಳು